ವಡಗೇರಾ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಜನಸ್ಪಂದನಾ ಕಾರ್ಯಕ್ರಮ

ವಡಗೇರಾ : ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಾಳೆ 21-06- 2024 ರಂದು ವಡಗೇರ ತಾಲೂಕಿನ ತಹಶೀಲ್ದಾರ ಕಚೇರಿಯ ಆವರಣದಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವಿದೆ ಎಂದು ತಹಸಿಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಂದಾಯ, ಗ್ರಾಮೀಣಾಭಿವೃದ್ಧಿ ಪಂಚಾಯತ್ ಅಭಿವೃದ್ಧಿ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು, ದೂರುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.