ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಷನ್ ಹಾವಳಿ ತಡೆಗೆ ಆಗ್ರಹ

ಶಹಾಪುರ : ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶಾತಿಗಾಗಿ ಮಕ್ಕಳಿಂದ ಅತಿ ಹೆಚ್ಚಿನ ಡೊನೇಷನ್ ತೆಗೆದುಕೊಳ್ಳುತ್ತಿದ್ದು ಕೂಡಲೇ ಅಧಿಕಾರಿಗಳು ಇತ್ತ ಕಡೆ ಗಮನಹರಿಸಬೇಕೆಂದು ಸರ್ ಎಂ ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷರಾದ ಪ್ರದೀಪ್ ಆಣಬಿ ಆರೋಪಿಸಿದ್ದಾರೆ.

ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪ್ರಧಾನ ಕಾರ್ಯದರ್ಶಿಗಳಿಗೆ ಶಹಪುರ ತಾಲೂಕು ತಹಶೀಲ್ದಾರರ ಮುಖಾಂತರ ಮನವಿ ಸಲ್ಲಿಸಿದ ಪ್ರದೀಪ್ ಅಣಬಿ, ಶಿಕ್ಷಣದ ಹೆಸರಿನಲ್ಲಿ ಪ್ರವೇಶಾತಿ ಶುಲ್ಕ ಶಾಲಾ ವಸ್ತ್ರಗಳ ಶುಲ್ಕ ಪಠ್ಯ ಪುಸ್ತಕ ನೋಟ್ ಪುಸ್ತಕಗಳು ಸೇರಿದಂತೆ ಇತರ ಸಾಮಗ್ರಿಗಳ ಶುಲ್ಕವನ್ನು ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ತೆಗೆದುಕೊಳ್ಳುವಂತೆ ಒತ್ತಡ ಹೇರುತ್ತಿದ್ದಾರೆ.ಈಗಾಗಲೇ ಮೇಲಾಧಿಕಾರಿಗಳಿಗೆ ದೂರು ನೀಡಿದರು ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ವಿದ್ಯೆ ಬಡವರ ಪಾಲಿಗೆ ಸಂಜೀವಿನಿಯಾಗಬೇಕು. ಇಂದು ದುರುಪಯೋಗವಾಗುತ್ತಿದೆ. ಕೂಡಲೇ ರಾಜ್ಯ ಮುಖ್ಯ ಪ್ರಧಾನ ಕಾರ್ಯದರ್ಶಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಒತ್ತಾಯಿಸಿದರು. ಸಂಗಮೇಶ ಬೇವಿನಹಳ್ಳಿ, ದೇವರಾಜ, ಸಿದ್ದಪ್ಪ, ಭೋಜಪ್ಪ,ಆಂಜನೇಯ ಇಮ್ಲಪುರ ಸೇರಿದಂತೆ ಇತರರು ಇದ್ದರು.