ವಸತಿ ನಿಲಯದ ಊಟದಲ್ಲಿ ಹುಳು ಪತ್ತೆ : ತಾಲೂಕಾಧಿಕಾರಿ ಅಮಾನತಿಗೆ ಆಗ್ರಹ, ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಪುರ : ತಾಲೂಕಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ವಸತಿ ನಿಲಯ ಆಹಾರದಲ್ಲಿ ಹುಳುಗಳು ಪತ್ತೆಯಾಗಿದ್ದು ವಸತಿ ನಿಲಯದ ತಾಲೂಕಾದಿಕಾರಿ ಅಧಿಕಾರಿಗಳೆ ನೇರ ಹೊಣೆಯಾಗಿದ್ದು ಕೂಡಲೇ ಅವರನ್ನು ಅಮಾನತು ಮಾಡಬೇಕು ಎಂದು ಸರ್ ಎಂ ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷರಾದ ಪ್ರದೀಪ್ ಅಣಬಿ ಆಗ್ರಹಿಸಿದ್ದಾರೆ.

ಇಂದು ತಹಶೀಲ್ದಾರರ ಮುಖಾಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಅವರು, ಕನ್ಯೆ ಕೋಳೂರು ರಸ್ತೆಯಲ್ಲಿರುವ ಈ ವಸತಿ ನಿಲಯದಲ್ಲಿ ಯಾರು ಕೇಳದೆ ಇರುವುದರಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಸ್ಥಿತಿ ಹೇಳತೀರದಾಗಿದೆ. ವಸತಿ ನಿಲಯದಲ್ಲಿ ಮೂಲಭೂತ ಸೌಕರ್ಯಗಳಿಲ್ಲ. ಊಟದಲ್ಲಿ ಹುಳುಗಳು ಬಂದರೆ ಅಂತಹ ಆಹಾರವನ್ನು ಮಕ್ಕಳು ಹೇಗೆ ಸೇವಿಸಬೇಕು. ಇದರ ಬಗ್ಗೆ ಮೇಲ್ವಿಚಾರಕರು ಏನು ಮಾಡುತ್ತಿದ್ದಾರೆ. ಸರಕಾರ ಕೋಟಿಗಟ್ಟಲೆ ಹಣವನ್ನು ಖರ್ಚು ಮಾಡುತ್ತಿದೆ. ಆದರೆ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಮಕ್ಕಳು ಇಂತಹ ಕಳಪೆ ಆಹಾರವನ್ನು ಸೇವಿಸಬೇಕಿದೆ.ಮಕ್ಕಳಿಗೆ ಆರೋಗ್ಯದಲ್ಲಿ ಏರುಪೇರಾದರೆ ಯಾರು ಹೊಣೆ.ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಇಲಾಖೆ ಮೇಲಾಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ.ಆದರೂ ಕ್ರಮ ಕೈಗೊಂಡಿಲ್ಲ.ಕೂಡದೆ ಅಧಿಕಾರಿಯನ್ನು ಅಮಾನತು ಮಾಡಿ ವಸತಿ ನಿಲಯದ ಮಕ್ಕಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಗುಣಮಟ್ಟದ ಆಹಾರ ನೀಡಬೇಕು ಎಂದು ಆಗ್ರಹಿಸಿದರು.

About The Author