ಡಿಡಿಯು ಪ್ರೌಢಶಾಲೆಯಲ್ಲಿ ಶೇ.100ರಷ್ಟು ಫಲಿತಾಂಶ

ಶಹಾಪುರ:ತಾಲೂಕಿನ ದೇವರಾಜ ಅರಸು ಶಿಕ್ಷಣ ಸಂಸ್ಥೆಯ ಪ್ರೌಢಶಾಲೆ(ಕನ್ನಡ ಮಾಧ್ಯಮ)ಯಲ್ಲಿ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬಂದಿದ್ದು, ಹಾಜರಾದ 51 ವಿದ್ಯಾರ್ಥಿಗಳಲ್ಲಿ 15 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 30 ವಿದ್ಯಾರ್ಥಿಗಳು ಪ್ರಥಮ ದರ್ಜೆ,06 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಶೇ. 100ರಷ್ಟು ಫಲಿತಾಂಶ ದಾಖಲಾಗಿದೆ.ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಭೀಮಣ್ಣ ಮೇಟಿ, ಕಾರ್ಯದರ್ಶಿಗಳಾದ ದೇವೇಂದ್ರ ಮೇಟಿ,ಮುಖ್ಯ ಗುರುಗಳು ಹಾಗೂ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

Leave a Reply

Your email address will not be published. Required fields are marked *