ವೈದ್ಯಕೀಯ ವಿದ್ಯಾರ್ಥಿಯ ಕೊಲೆ ಪ್ರಕರಣ : ಖಾಸಗಿ ವೈದ್ಯರ ಮುಷ್ಕರ : ರೋಗಿಗಳ ಪರದಾಟ

ಶಹಾಪುರ : ಕೋಲ್ಕತಾದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ಹಾಗೂ ಆಯುಷ್   ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಖಾಸಗಿ ಆಸ್ಪತ್ರೆಗಳು ಬಂದ್ಗಿ ಕರೆ ನೀಡಿದ್ದವು. ಆಸ್ಪತ್ರೆಗಳ ಬಂದ್ನಿಂದಾಗಿ ನಗರದಾದ್ಯಂತ ರೋಗಿಗಳು ಪರದಾಡುವಂಥಾಯ್ತ.ಶನಿವಾರ ಬೆಳಗ್ಗೆನಿಂದಲೇ ತಾಲೂಕಿನಾದ್ಯಂತ ಗ್ರಾಮೀಣ ಪ್ರದೇಶಗಳು ಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಹೊರತುಪಡಿಸಿ ಒಪಡಿಗಳನ್ನು ಬಂದ್ ಮಾಡಲಾಗಿತ್ತು. ವರದಾದ್ಯಂತ ವೈದ್ಯರು ಮೌನ ಪ್ರತಿಭಟನೆ ನಡೆಸಿದರು.ಐಎಂಎ ತಾಲೂಕಾಧ್ಯಕ್ಷ ಡಾ. ಸುಧಾತ್ ದರ್ಶನಾಪುರ್ ಮಾತನಾಡಿ  ಕೋಲ್ಕತ್ತಾದ ಆರ್ಜಿಕರ್  ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಘಟನೆ ಅಮಾನವೀಯವಾದದ್ದು.ಈ ರೀತಿ ಘಟನೆ ಆಗದಂತೆ ಎಚ್ಚರಿಕೆ ವಹಿಸಬೇಕಾಗಿದೆ. ಆಸ್ಪತ್ರೆಯಲ್ಲಿ ಕೆಲಸ ಮಾಡುವ ವೈದ್ಯರಿಗೆ ಮತ್ತು ಮಹಿಳೆಯರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.
ಆಯುಷ್ ಫೆಡರೇಶನ್ ಆಫ್ ಇಂಡಿಯಾದ ತಾಲೂಕು ಅಧ್ಯಕ್ಷ ಡಾ. ಬಸವರಾಜ  ಇಜೇರಿ ಮಾತನಾಡಿ, ವೈದ್ಯರಿಗೆ ರಕ್ಷಣೆ ಸಿಗುತ್ತಿಲ್ಲ. ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾದವರ ರಕ್ಷಣೆಯಾಗುತ್ತಿದೆ. ಜೀವವನ್ನು ಉಳಿಸುವ ವೈದ್ಯರಿಗೆ ತಮ್ಮ ಜೀವವನ್ನು ಉಳಿಸಿಕೊಳ್ಳುವ ಕೆಲಸ ಆಗುತ್ತಿಲ್ಲ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕಿದೆ ಅಲ್ಲಿಯವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ನೊಂದ ಕುಟುಂಬಕ್ಕೆ ಸರ್ಕಾರ ಎಲ್ಲಾ ರೀತಿಯ ನೆರವು ಬೆಂಬಲ ನೀಡಬೇಕು ಎಂದು ಒತ್ತಾಯಿಸಿದರು.ಐಎಂಎ ತಾಲೂಕ ಕಾರ್ಯದರ್ಶಿ ಡಾ. ಬಸವರಾಜ ಮುಂಬೈ, ಡಾ. ಎಸ್ ಆರ್ ಸಿನ್ನೂರ, ಡಾ. ಚಂದ್ರಶೇಖರ್ ಸುಬೇದಾರ, ಆಯುಷ್ ಫೆಡರೇಶನ್ ಆಫ್ ಇಂಡಿಯಾ ಡಾ. ಮಲ್ಲಿಕಾರ್ಜುನ ಯಕ್ಷಿಂತಿ, ಡಾ. ಶಂಭುಲಿಂಗ ಮನಗೂಳಿ, ಡಾ. ಬಸವರಾಜ ಯಲ್ಹೇರಿ, ಡಾ. ರವಿ ಪಡೆಕನೂರ್ ಸೇರಿದಂತೆ ಎಲ್ಲಾ ಖಾಸಗಿ ವೈದ್ಯರು ಬೆಂಬಲ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *