ಸಿದ್ದರಾಮಯ್ಯನವರ ಪರ ಕುರುಬ ಸಮಾಜ ಮಠಾಧೀಶರ ಬೆಂಬಲ

ಯಾದಗಿರಿ: ಕುರಿ ಹೊಲಸು ತಿನ್ನಲ್ಲ ಕುರುಬರು ತಪ್ಪು ,ಮಾಡಿಲ್ಲ. ಮುಡಾ ಪ್ರಕರಣದಲ್ಲಿ ಯಾವ ತಪ್ಪನ್ನು ಮಾಡದ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಪ್ರಾಸಿಕಕ್ಯೂಷನಗೆ ಅನುಮತಿ ನೀಡಿರುವುದನ್ನು ಹಾಲುಮತ ಸಮಾಜದ ಶ್ರೀ ಜಗದ್ಗುರು ರೇವಣಸಿದ್ದೇಶ್ವರ ಶಾಂತಮಯ ಮಹಾಸ್ವಾಮಿಗಳು ಸರೂರು (ಅಗತೀರ್ಥ) ತೀವ್ರವಾಗಿ ಖಂಡಿಸಿದ್ದಾರೆ.ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ವಿರುದ್ಧದ ತನಿಖೆಯು ರಾಜಕೀಯ ಪ್ರೇರಿತವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸುಸ್ಥಿರ ಸರಕಾರ ದುರ್ಬಲಗೊಳಿಸುವ ಪ್ರಯತ್ನ ಇದಾಗಿದೆ. ಮುಡಾ ಪ್ರಕರಣಕ್ಕೂ ಸಿದ್ದರಾಮಯ್ಯನವರಿಗೂ ಯಾವುದೇ ಸಂಬಂಧವಿಲ್ಲ. ನಿವೇಶನ ಹಂಚಿಕೆ ಸಮಯದಲ್ಲೂ ಕೂಡ ಅವರು ಮುಖ್ಯಮಂತ್ರಿ ಆಗಿರಲಿಲ್ಲ. ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ನೀತಿ ಅನುಸರಿಸುತ್ತಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದಂತಾಗಿದೆ. ಸಿದ್ದರಾಮಯ್ಯನವರು ಬಡವರ ಹಾಗೂ ದೀನದಲಿತರ ಏಳಿಗೆಗಾಗಿ ಹಗಲಿರುಳೂ ಶ್ರಮಿಸುವಂಥ ನೇರನುಡಿಯ ನಾಯಕ ಅವರು ಯಾವುದೇ ರೀತಿಯಾದ ತಪ್ಪು ಮಾಡಿರಲು ಸಾಧ್ಯವಿಲ್ಲ. ಬಿಜೆಪಿ ಜೆಡಿಎಸ್ ನವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಏನು ತಪ್ಪು ಮಾಡದ ಸಿದ್ದರಾಮಯ್ಯನವರನ್ನೆ ಪ್ರಮುಖವಾಗಿ ಗುರಿಯಾಗಿಸಿಕೊಂಡು ಅವರ ತೇಜೊವದೆ ಮಾಡುತ್ತಿರುವುದು ಸರಿಯಲ್ಲ. ರಾಜ್ಯದ ಕುರುಬ ಸಮಾಜ ಹಾಗೂ ಸಮಾಜದ ಎಲ್ಲಾ ಮಠಾಧೀಶರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರ ಬೆಂಬಲಕ್ಕೆ ನಿಲ್ಲುವುದಾಗಿ ತಿಳಿಸಿದ್ದಾರೆ.

About The Author