ಒಗ್ಗಟ್ಟಿನಿಂದ ಹೋರಾಟ ಮಾಡಿದಾಗ ಮಾತ್ರ ಜಯ ಸಿಗುತ್ತದೆ :  ವಿದ್ಯಾಧರ ಜಾಕ

ವಡಗೇರಾ: ರೈತರ ಸಮಸ್ಯೆಗಳ ಕುರಿತು ಪ್ರತಿಯೊಬ್ಬರು ಒಗ್ಗಟ್ಟಿನಿಂದ ಹೋರಾಟ ಮಾಡಿದಾಗ ಮಾತ್ರ ಜಯ ಕಾಣಲು ಸಾಧ್ಯ ಎಂದು ರಾಜ್ಯ ರೈತ ಸಂಘ ಹಸಿರು ಸೇನೆ ವಾಸುದೇವ ಮೇಟಿ ಬಣದ ವಡಗೇರಾ ತಾಲೂಕು ಅಧ್ಯಕ್ಷ ವಿದ್ಯಾಧರ ಜಾಕ ಹೇಳಿದರು.ತಾಲೂಕಿನ ತೇಕರಾಳ ಗ್ರಾಮದಲ್ಲಿ ರಾಜ್ಯ ರೈತ ಸಂಘ ಹಸಿರು ಸೇನೆ ನೂತನ ಗ್ರಾಮ ಘಟಕದ ಪದಾಧಿಕಾರಿಗಳ ನೇಮಕ ಮಾಡಿ ಅವರು ಮಾತನಾಡಿದರು. ನೀರಾವರಿ ಹಾಗೂ ಗ್ರಾಮೀಣ ಭಾಗದ ರಸ್ತೆಗಳು ಮತ್ತು ತಾಲೂಕಿಗೆ ಸಂಬಂಧಿಸಿದಂತೆ ಇನ್ನುಳಿದ ಸಮಸ್ಯೆಗಳ ವಿರುದ್ಧ ಹಂತ ಹಂತವಾಗಿ ಹೋರಾಟ ಹಮ್ಮಿಕೊಳ್ಳಲಾಗುವುದು ಸಂಘಟನೆಯ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸಿ ಮತ್ತು ಗ್ರಾಮದ ರೈತರ ಹಾಗೂ ಇನ್ನಿತರ ಸಮಸ್ಯೆಗಳು ಕುರಿತು ನಮ್ಮ ಗಮನಕ್ಕೆ ತನ್ನಿ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಹೋರಾಟ ಮಾಡುವುದಾಗಿ ತಿಳಿಸಿದರು.

ಗ್ರಾಮ ಘಟಕದ ಅಧ್ಯಕ್ಷರಾಗಿ ಸಾಬಣ್ಣ ಶಹಾಪುರ  ಉಪಾಧ್ಯಕ್ಷರಾಗಿ ಮರಿಗೌಡ ಹೊಸಮನಿ ಇವರನ್ನು ನೇಮಕ ಮಾಡಲಾಯಿತು.

ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಶರಣು ಜಡಿ, ಸತೀಶ್ ಪೂಜಾರಿ, ಮಲ್ಲು ನಾಟೇಕಾರ, ನಾಗರಾಜ ಸ್ವಾಮಿ, ಅಪ್ಪಾಜಿ ಕಲ್ಲಪ್ಪನೂರ್ ಗ್ರಾಮ ಘಟಕದ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *