ರಾಜ್ಯಪಾಲರನ್ನು ವಜಾಗೊಳಿಸುವಂತೆ ನಿಖಿಲ್ ವಿ ಶಂಕರ ಆಗ್ರಹ 

ಶಹಾಪುರ : ಜನರಿಂದ ಆಯ್ಕೆಯಾದ ಸರಕಾರವನ್ನು ವಜಾಗೊಳಿಸಲು ವಿರೋದ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನವರು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಕೇಂದ್ರ ಸರಕಾರದ ಅಣತಿಯಂತೆ ರಾಜ್ಯಪಾಲರು ನಡೆದುಕೊಳ್ಳುತ್ತಿದ್ದಾರೆ. ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ಸಂವಿಧಾನಕ್ಕೆ ವಿರುದ್ಧವಾದದ್ದು. ಕೂಡಲೇ ರಾಷ್ಟ್ರಪತಿಗಳು ರಾಜ್ಯಪಾಲರನ್ನು ವಜಾಗೊಳಿಸಬೇಕು. ಇಲ್ಲವೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕೆಂದು ಕರ್ನಾಟಕ ಯುವ ಕಾಂಗ್ರೆಸ್ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ನಿಖಿಲ್ ವಿ ಶಂಕರ ಆಗ್ರಹಿಸಿದ್ದಾರೆ.
ಪತ್ರಿಕಾ ಹೇಳಿಕೆಯೊಂದನ್ನು ನೀಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ., ಕಳೆದ ಚುನಾವಣೆಯಲ್ಲಿ 136 ಸ್ಥಾನಗಳನ್ನು ಗೆದ್ದು ಸಂವಿಧಾನಬದ್ಧವಾಗಿ ಆಡಳಿತ ನಡೆಸುತ್ತಿದ್ದೇವೆ.ಶೋಷಿತರಿಗೆ, ಬಡವರಿಗೆ, ಮಹಿಳೆಯರಿಗೆ ಉಚಿತ ಗ್ಯಾರಂಟಿಗಳನ್ನು ಒದಗಿಸಿಕೊಟ್ಟಿದ್ದೇವೆ.ಇದನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸಹಿಸಿಕೊಳ್ಳಲಾಗುತ್ತಿಲ್ಲ. ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸಲಾಗುತ್ತಿದೆ. ರಾಜ್ಯಪಾಲರ ಮೂಲಕ ಬಿಜೆಪಿ ಮತ್ತು ಜೆಡಿಎಸ್ ನವರು ಸೇಡಿನ ರಾಜಕಾರಣಕ್ಕೆ ಮುಂದಾಗಿದ್ದಾರೆ ಎಂದು ಕಿಡಿ ಕಾರಿದರು.
ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಶಾಸಕರಾದ ಜನಾರ್ಧನರೆಡ್ಡಿ ರವರ ಮೇಲೆ ಗಂಭೀರ ಆರೋಪಗಳಿದ್ದು,ಈಗಾಗಲೇ ರಾಜ್ಯಪಾಲಕರಿಗೆ ಪ್ರಾಸಿಕ್ಯೂಷನ್ ಅನುಮತಿ ಕೇಳಲಾಗಿದೆ.ಅವುಗಳನ್ನು ಬದಿಗೊತ್ತಿ ಒಂದೇ ದಿನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ ಗೆ  ರಾಜ್ಯಪಾಲರು ಅನುಮತಿ ಕೊಟ್ಟಿರುವುದು ಯಾವ ನ್ಯಾಯ ಎಂದರು.ಕೂಡಲೆ ರಾಜ್ಯಪಾಲರನ್ನು ರಾಷ್ಟ್ರಪತಿಗಳು ಹಿಂದಕ್ಕೆ ಕರೆಯಿಸಿಕೊಳ್ಳಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದರು.

About The Author