ಗ್ರಾಮೀಣಾಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು – ಸುನೀಲಕುಮಾರ

ಶಹಾಪುರ: ಭಾರತವು ಕೃಷಿ ಪ್ರಧಾನ ರಾಷ್ಟ್ರ. ದೇಶ ಹಳ್ಳಿಗಳಿಂದ ಒಳಗೊಂಡಿರುವ ಪ್ರಮುಖ ರಾಷ್ಟ್ರವಾಗಿದೆ
ಒಳಗೊಂಡಿರುವ ಪ್ರಮುಖ ರಾಷ್ಟ್ರವಾಗಿದೆ. ಆರ್ಥಿಕ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಸುನೀಲಕುಮಾರ ಹೇಳಿದರು.
    ತಾಲೂಕಿನ ರಸ್ತಾಪೂರ ಗ್ರಾಮದಲ್ಲಿ ಬಾಪುಗೌಡ ದರ್ಶನಾಪುರ ಸ್ಮಾರಕ ಮಹಿಳಾ ಪದವಿ ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ಹಮ್ಮಿಕೊಂಡ ಶಿಬಿರದಲ್ಲಿ ಗ್ರಾಮೀಣಾಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಎನ್ನುವ ವಿಷಯದ ಕುರಿತು ಉಪನ್ಯಾಸ ನೀಡಿದರು. ಹಳ್ಳಿಗಳ ಪರಿಸರದ ಗುಡಿ ಕೈಗಾರಿಕೆ, ಹೈನುಗಾರಿಕೆ, ಪಶಸಂಗೋಪನೆ, ಕೃಷಿ ಆಧಾರಿತ ಕಸಬುಗಳಲ್ಲಿ, ಕೃಷಿ ಚಟುವಟಿಕೆಗಳಲ್ಲಿ ಮಹಿಳೆ ಪ್ರಧಾನ ವ್ಯಕ್ತಿಯಾಗಿದ್ದಾರೆ. ಆರ್ಥಿಕ ಚಟುವಟಿಕೆಗಳ ನಿರ್ವಹಣೆ, ಕುಟುಂಬ ನಿರ್ವಹಣೆಯ ಜೊತೆಗೆ ಇಂದು ಶಿಕ್ಷಣ ಪಡೆದು ಎಲ್ಲಾ ಕ್ಷೇತ್ರಗಳಲ್ಲಿ ಪುರುಷನ ಸರಿಸಮಾನವಾಗಿ ಅವಕಾಶಗಳನ್ನು ಪಡೆದುಕೊಂಡು ಕಾರ್ಯನಿರ್ವಹಿಸುತ್ತ ಸ್ವಾವಲಂಬನೆಯ ಬದುಕನ್ನು ಕಟ್ಟಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿ ತಿಳಿಸಿದರು.
           ದೇವದುರ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಉಪನ್ಯಾಸಕ ಶಿವರಾಜ ಎಚ್.ಡಿ. ಅವರು ರಾಷ್ಟ್ರೀಯ ಸೇವಾ ಯೋಜನೆ ಮತ್ತು ವ್ಯಕ್ತಿತ್ವ ವಿಕಸನ ಕುರಿತು ಉಪನ್ಯಾಸ ನೀಡಿದರು. ಕಾಲೇಜಿನ ಕನ್ನಡ ಉಪನ್ಯಾಸಕ ದೇವಿಂದ್ರಪ್ಪ ಆಲ್ದಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಪ್ರೊ. ಶಿವಲಿಂಗಣ್ಣ ಸಾಹು, ಉಪನ್ಯಾಸಕರಾದ ಗಂಗಣ್ಣ ಹೊಸ್ಮನಿ, ಸತೀಶ ತುಳೇರ, ಸಂಗಣ್ಣ ದಿಗ್ಗಿ, ಮಾನಯ್ಯ ಗೌಡಗೇರಾ ಎನ್.ಎಸ್.ಎಸ್. ಎ ಘಟಕದ ಅಧಿಕಾರಿ ರಾಘವೇಂದ್ರ ಹಾರಣಗೇರ, ಎನ್.ಎಸ್.ಎಸ್.ಬಿ ಘಟಕದ ಅಧಿಕಾರಿ ಭೀಮಪ್ಪ ಭಂಡಾರಿ  ಉಪಸ್ಥಿತರಿದ್ದರು.
      ಭಾಗ್ಯಜ್ಯೋತಿ ಕಾರ್ಯಕ್ರಮ ನಿರ್ವಹಿಸಿದರು. ಶಿಬಿರಾರ್ಥಿ ಅಂಜುಮ್ ಬೇಗಂ ಪ್ರಾರ್ಥಿಸಿದರು. ಭಾಗ್ಯಶ್ರೀ ಮತ್ತು ಶಿಲ್ಪ ನಿರೂಪಿಸಿದರು. ಅನಿತಾ ವಂದಿಸಿದರು. ಶಿಬಿರಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿದ್ಯಾರ್ಥಿನಿ ಭಾಗ್ಯಶ್ರೀ ಝಾನ್ಸಿ ರಾಣ  ಲಕ್ಷ್ಮಿಭಾಯಿ ಛದ್ಮ ವೇಷದಲ್ಲಿ ಗಮನ ಸೆಳೆದರು.

About The Author