ಉಪ ಚುನಾವಣೆ ಪ್ರಚಾರಕ್ಕೆ ಉಸ್ತುವಾರಿಯಾಗಿ ಕೆಪಿಸಿಸಿಯಿಂದ ರಾಜಾ ಮೈನುದ್ದೀನ್ ಜಮಾದರ ನೇಮಕ 

ಬೆಂಗಳೂರು: ಬಳ್ಳಾರಿ ಜಿಲ್ಲೆಯ ಸಂಡೂರು, ಚನ್ನಪಟ್ಟಣ,ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯು  ನವೆಂಬರ್ 13ರಂದು ನಡೆಯಲಿದ್ದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ ಸಿ ಚಂದ್ರಶೇಖರ ರವರು ನನ್ನನ್ನು ಉಪ ಚುನಾವಣೆಗಳ ಬೂತ್ ಮಟ್ಟದಲ್ಲಿ ಪ್ರಚಾರ ಕೈಗೊಂಡು ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕೆಂದು ನೇಮಕ ಮಾಡಿದ್ದಾರೆ ಎಂದು ಕಲ್ಬುರ್ಗಿ ಗ್ರಾಮೀಣ ಕ್ಷೇತ್ರದ ಕೆಪಿಸಿಸಿ ಜಿಲ್ಲಾ ಸಂಯೋಜಕರಾದ ರಾಜಾ ಮೈಯಿನುದ್ದೀನ್ ಜಮಾದಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಮೂರು ಕ್ಷೇತ್ರಗಳ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ಮಹತ್ವದ್ದಾಗಿದ್ದು, ಈ ಮೂರೂ ಕ್ಷೇತ್ರಗಳ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳ ಪರ ಶ್ರಮವಹಿಸಿ ಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವುದಾಗಿ ರಾಜಾ ಮೈನುದ್ದೀನ್ ಜಮಾದಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *