ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ ಡಾ.ಕೃಷ್ಣಮೂರ್ತಿ ಅಭಿಪ್ರಾಯ

ಡಾ.ಕೃಷ್ಣಮೂರ್ತಿ ಜಿಲ್ಲಾಧ್ಯಕ್ಷರು
ಕೆಪಿಸಿಸಿ ವೈದ್ಯಕೀಯ ಘಟಕ ಯಾದಗಿರಿ 

*********

ಶಹಾಪುರ,

ನವೆಂಬರ್ 13ರಂದು ರಾಜ್ಯದ ಚನ್ನಪಟ್ಟಣ  ಶಿಗ್ಗಾವಿ ಸಂಡೂರಿನಲ್ಲಿ ನಡೆಯುವ ಉಪಚುನಾವಣೆಯಲ್ಲಿ ಜಿದ್ದಾಜಿದ್ದಿನ ಹೋರಾಟವಿದ್ದರೂ ಕಾಂಗ್ರೆಸ್ ಪಕ್ಷ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಯಾದಗಿರಿ ಕೆಪಿಸಿಸಿ ವೈದ್ಯಕೀಯ ಘಟಕದ ಜಿಲ್ಲಾಧ್ಯಕ್ಷರಾದ ಡಾ. ಕೃಷ್ಣಮೂರ್ತಿಯವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಈ ಸಂದರ್ಭದಲ್ಲಿ ಪತ್ರಿಕ ಹೇಳಿಕೆ ನೀಡಿದ ಅವರು, ಕಳೆದ ಒಂದುವರೆ ವರ್ಷದಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ಒಳ್ಳೆಯ ಆಡಳಿತ ನಡೆಸುತ್ತಿದೆ.ಶೋಷಿತರ ಬಡವರ ಪರವಿರುವ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆ.ಸಾವಿರಾರು ಮಹಿಳೆಯರಿಗೆ ನೇರವಾಗಿ ಎರಡು ಸಾವಿರ ರೂಪಾಯಿಗಳನ್ನು ಅವರ ಬ್ಯಾಂಕ್ ಖಾತೆಗಳಿಗೆ ಯಾವುದೇ ದಲ್ಲಾಳಿಗಳಿಲ್ಲದೆ ಜಮಾ ಮಾಡಲಾಗಿದೆ.

ಮಹಿಳೆಯರು ಕಾಂಗ್ರೆಸ್ ಪರವಾಗಿ ಇದ್ದಾರೆ ಎನ್ನುವ ಬಲವಾದ ನಂಬಿಕೆ ಕಾಂಗ್ರೆಸ್ ಪಕ್ಷಕ್ಕಿದೆ.ಮೂರು ಕ್ಷೇತ್ರಗಳಲ್ಲಿ ಪ್ರತಿ ಕ್ಷೇತ್ರದಲ್ಲಿ 30 ರಿಂದ 40 ಸಾವಿರದಷ್ಟು ಮಹಿಳಾ ಮತದಾರರು ಇರಬಹುದು ಎನ್ನುವ ನಂಬಿಕೆ ಇದ್ದು, ಅವರು ಯಾವತ್ತೂ ಕಾಂಗ್ರೆಸ್ ಪರ ಇದ್ದಾರೆ. ಮಹಿಳಾ ಮತದಾರರು ಕಾಂಗ್ರೆಸ್ ಪಕ್ಷವನ್ನು ಮರೆಯುವುದಿಲ್ಲ ಎನ್ನುವ ವಿಶ್ವಾಸವಿದೆ. ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ವಿಶ್ವಾಸವಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಯಾದಗಿರಿ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ಅವರು ಕೂಡ ಉಪಚುನಾವಣೆಯಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ರಾಜ್ಯಾದ್ಯಂತ ಅವರ ಅಭಿಮಾನಿಗಳಿದ್ದು ಮೂರು ಕ್ಷೇತ್ರದಲ್ಲಿ ಅವರ ಅಭಿಮಾನಿಗಳಿಂದ ಕಾಂಗ್ರೆಸ್ ಪರ ಪ್ರಚಾರ ಕೈಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ ಖರ್ಗೆ ವೈದ್ಯಕೀಯ ಸಚಿವರಾದ ಶರಣಪ್ರಕಾಶ ಪಾಟೀಲ್ ಸೇರಿದಂತೆ ಹಲವಾರು ಸಚಿವರು ಮೂರು ಕ್ಷೇತ್ರದಲ್ಲಿ ಪಕ್ಷದ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಂಡಿದ್ದು ಕಾಂಗ್ರೆಸ್ ಪಕ್ಷ ಗೆಲ್ಲುವ ವಿಶ್ವಾಸವಿದೆ.

ಉಪಚುನಾವಣೆಯ ನಂತರ ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ಸ್ಥಗಿತಗೊಳಿಸುವುದಿಲ್ಲ. ಸೋಲುವ ಭಯದಲ್ಲಿರುವ ಬಿಜೆಪಿ ಮತ್ತು ಜೆಡಿಎಸ್  ಪಕ್ಷದವರು ಸುಳ್ಳುವದಂತಿ ಹಬ್ಬಿಸಿ ಪ್ರಚಾರ ಮಾಡುತ್ತಿದ್ದಾರೆ. ಲೋಕಸಭೆಯಲ್ಲಿಯೂ ಕೂಡ ಈ ರೀತಿಯ ಸುಳ್ಳು ಪ್ರಚಾರ ಮಾಡಿದರು. ಉಪಚುನಾವಣೆಯ ನಂತರವೂ ಕೂಡ ಗ್ಯಾರಂಟಿಗಳನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಷ್ಟವಾಗಿ ತಿಳಿಯಪಡಿಸಿದ್ದಾರೆ.ಶಿಗ್ಗಾವಿ ಸಂಡೂರು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ವಿಶ್ವಾಸವಿದೆ.ಕಾಂಗ್ರೇಸ್ ಮುಖಂಡರಾದ ಬಸವರಾಜ ಅತ್ನೂರು ತಿಳಿಸಿದರು.