ಉಪ ಚುನಾವಣೆ ಫಲಿತಾಂಶ | ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಡಾ. ಕೃಷ್ಣಮೂರ್ತಿ ಹರ್ಷ

 
ಶಹಾಪುರ : ಶನಿವಾರದಂದು ರಾಜ್ಯದ ಸಂಡೂರು ಚನ್ನಪಟ್ಟಣ ಶಿಗ್ಗಾವಿ ಮೂರು ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಹೊರಬಂದಿದ್ದು, ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದೆ. ಈ ಮೊದಲೇ ಪತ್ರಿಕ ಹೇಳಿಕೆಯಲ್ಲಿ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುತ್ತದೆ ಎಂದು ಹೇಳಿದ್ದೆ. ಅದೇ ರೀತಿಯಾಗಿ ಗೆಲುವು ಸಾಧಿಸಿದೆ.ಈ ಅಭೂತಪೂರ್ವ ಗೆಲುವಿಗೆ ಪಕ್ಷದ ಕಾರ್ಯಕರ್ತರು ಮತದಾರ ಬಾಂಧವರಿಗೆ ಅಭಿನಂದನೆಗಳನ್ನು ತಿಳಿಸುತ್ತಾ, ಸರ್ಕಾರದ ಅಭಿವೃದ್ಧಿ ಕಾರ್ಯಗಳು, ಐದು ಗ್ಯಾರಂಟಿ ಯೋಜನೆಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪ ಮುಖ್ಯಮಂತ್ರಿ ಡಿಕೆ.ಶಿವುಕುಮಾರ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ವೈದ್ಯಕೀಯ ಸಚಿವರಾದ ಶರಣಪ್ರಕಾಶ ಪಾಟೀಲ್, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ಉಪಚುನಾವಣೆಯಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದರು.ಅದರ ಫಲವಾಗಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್  ಗೆಲುವು ಸಾಧಿಸಿದೆ.  ಮತದಾರರಿಗೆ ಎಂದು ತಿಳಿಸಿದರು.

*********************
ಬಿಜೆಪಿ ಮತ್ತು ಜೆಡಿಎಸ್ ರವರು ಉಪಚುನಾವಣೆಯಲ್ಲಿ ಸಂಪೂರ್ಣವಾಗಿ ನೆಲಕಚ್ಚಿವೆ. ಕಾಂಗ್ರೆಸ್ ಪಕ್ಷದ ಶ್ರಮ, ಅಭಿವೃದ್ಧಿ ಕಾರ್ಯಗಳು ಮೂರು ಕ್ಷೇತ್ರದ ಗೆಲುವಿಗೆ ಕಾರಣವಾಗಿವೆ. ಬಿಜೆಪಿ ಪಕ್ಷದವರು ಸೋಲನ್ನು ತಡೆದುಕೊಳ್ಳಲಾಗದೆ ಸರ್ಕಾರವು ಹಣಬಲದಿಂದ ಗೆದ್ದಿದೆ ಎಂದು ಸುಳ್ಳು ಹೇಳುತ್ತಿದ್ದಾರೆ.ಐದು ಗ್ಯಾರಂಟಿ ಯೋಜನೆಗಳು ಪಕ್ಷದ ಗೆಲುವಿಗೆ ಕಾರಣವಾಗಿವೆ. ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಶ್ರಮ ವಹಿಸಿ ಪಕ್ಷದ ಪರ ಕೆಲಸ ಮಾಡಿದ್ದಾರೆ. ಸರ್ಕಾರದ ಯೋಜನೆಗಳು ಮುಂದುವರೆಯುತ್ತವೆ.ಗೆಲುವಿಗೆ ಕಾರಣಿ ಕರ್ತರಾದ ಮತದಾರರಿಗೆ ಅಭಿನಂದನೆಗಳು ಎಂದು ಕಾಂಗ್ರೆಸ್ ಮುಖಂಡರಾದ ಬಸವರಾಜ ಅತ್ನೂರು ತಿಳಿಸಿದ್ದಾರೆ.