ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು, ಅಭಿವೃದ್ಧಿ ಕಾರ್ಯಗಳ ಗೆಲುವಾಗಿದೆ : ರಾಜ್ ಮೊಹಿನುದ್ದೀನ್

ಶಹಾಪುರ : ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದೆ ಎಂದು ರಾಜ್ಯ ಕೆಪಿಸಿಸಿ ಸಂಯೋಜಕರು ಮತ್ತು ಕಲಬುರ್ಗಿ ಗ್ರಾಮೀಣ ಕ್ಷೇತ್ರದ ವೀಕ್ಷಕರಾದ ರಾಜ್ ಮೊಹಿನುದ್ದೀನ್ ಹರ್ಷ ವ್ಯಕ್ತಪಡಿಸಿದರು.ಒಂದುವರೆ ವರ್ಷದಲ್ಲಿ ಕಾಂಗ್ರೆಸ್ ಪಕ್ಷ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಬಡವರ ಪಾಲಿಗೆ ಸಂಜೀವಿನಿ ಯಾದ ಗೃಹಲಕ್ಷ್ಮಿ,ಶಕ್ತಿ ಯೋಜನೆಗಳು ಹಲವಾರು ಜನರಿಗೆ ಉಪಯೋಗಕಾರಿ ಯೋಜನೆಯಾಗಿವೆ.  ದೇವಸ್ಥಾನಗಳಿಗೂ ಸರ್ಕಾರ ಒತ್ತು ಕೊಟ್ಟಿದ್ದು, ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹಾಗೂ ಸಚಿವರ ಹಾಗೂ ಜಿಲ್ಲೆಯ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪೂರ,ನಮ್ಮ ಜಿಲ್ಲೆಯ ಶಾಸಕರು ಸೇರಿದಂತೆ ಹಲವರ ಪ್ರಚಾರದ ಶ್ರಮದಿಂದ ಶಿಗ್ಗಾವಿ, ಚನ್ನಪಟ್ಟಣ, ಸಂಡೂರುಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಮನೆ ಮನೆಗೆ ತೆರಳಿ ಸರಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮತದಾರರಿಗೆ ಮನದಟ್ಟು ಮಾಡಿ  ತಿಳಿಸಲಾಯಿತು.ಇಂದರಿಂದಾಗಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ ಎಂದು ಹರ್ಷ ವ್ಯಕ್ತಪಡಿಸಿದರು.

*****************************
ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಕಾಂಗ್ರೆಸ್ ಪಕ್ಷದ ಅಭಿವೃದ್ಧಿಪರ ಗೆಲುವಾಗಿದೆ. ಸರಕಾರದ ಯೋಜನೆಗಳು ಮತದಾರರ ಕೈಹಿಡಿದಿವೆ. ಮತದಾರರು ಯಾವತ್ತೂ ಯಾರ ಆಮಿಷಕ್ಕೆ ಒಳಗಾಗದೆ ಅಭಿವೃದ್ಧಿಪರ ಮತ ಚಲಾಯಿಸಿದ್ದಾರೆ. ಮುಖ್ಯಮಂತ್ರಿಯನ್ನೊಳಗೊಂಡು ಸಚಿವರು ಶಾಸಕರು ಕೂಡ ಎಲ್ಲಾ ಮೂರು ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಿದ್ದು ಗೆಲುವಿಗೆ ಕಾರಣವಾಯಿತು ಎಂದು ಯಾದಗಿರಿ ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಮಾಧ್ಯಮ ವಕ್ತಾರರಾದ ಚಂದ್ರಶೇಖರ ಕಟ್ಟಿಮನಿ ಹರ್ಷ ವ್ಯಕ್ತಪಡಿಸಿದ್ದಾರೆ.
ಚಂದ್ರಶೇಖರ್ ಕಟ್ಟಿಮನಿ
ಯಾದಗಿರಿ ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಮಾಧ್ಯಮ ವಕ್ತಾರ