ಬೀದರ,ನವೆಂಬರ್ ೧೧,೨೦೨೪,
ಬೀದರ ಜಿಲ್ಲಾ ಪಂಚಾಯತಿಯಲ್ಲಿ ನವೆಂಬರ್ 26 ರಂದು ಭಾರತ ಸಂವಿಧಾನದ 75 ನೆಯ ವರ್ಷಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಸಂವಿಧಾನ ದಿನಾಚರಣೆಯ 75 ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ಬೀದರ ಜಿಲ್ಲಾ ಪಂಚಾಯತಿಯಲ್ಲಿ ‘ ಸಂವಿಧಾನಗೋಡೆ'( constitution wall) ಅಳವಡಿಸಲಾಗಿದ್ದು ಬೆಳಿಗ್ಗೆ 10.00ಘಂಟೆಗೆ ಜಿಲ್ಲಾ ಪಂಚಾಯತಿಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಗಿರೀಶ ಬದೋಲೆಯವರು ‘ ಸಂವಿಧಾನದ ಗೋಡೆ’ ಯನ್ನು ಅನಾವರಣಗೊಳಿಸಿದರು.ಈ ಸಂದರ್ಭದಲ್ಲಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಗಿರೀಶ ಬದೋಲೆಯವರು ಮತ್ತು ಜಿಲ್ಲಾ ಪಂಚಾಯತಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಸಂವಿಧಾನಗೋಡೆಯಲ್ಲಿ ತಮ್ಮ ಹಸ್ತಾಕ್ಷರದ ಸಹಿಮಾಡುವ ಮೂಲಕ ಸಂವಿಧಾನಕ್ಕೆ ಬದ್ಧತೆಯನ್ನು ಘೋಷಿಸಿದರು.ಸಂವಿಧಾನದ ಗೋಡೆಯಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಭಾರತದ ಸಂವಿಧಾನದ ಪೀಠಿಕೆಯನ್ನು ಬರೆಯಲಾಗಿದೆ ಎನ್ನುವುದು ಗಮನಾರ್ಹವಾದುದು.
ಬಳಿಕ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಡಾಕ್ಟರ್ ಗಿರೀಶ ಬದೋಲೆಯವರು ಜಿಲ್ಲಾ ಪಂಚಾಯತಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯವರಿಗೆ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.
ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ,ಮುಖ್ಯ ಲೆಕ್ಕಾಧಿಕಾರಿ ಶ್ರೀಕಾಂತ,ಯೋಜನಾ ನಿರ್ದೇಶಕ ಜಗನ್ನಾಥ ಮೂರ್ತಿ,ಎಸ್ ಬಿ ಎಂ ವಿಶೇಷ ಕರ್ತವ್ಯಾಧಿಕಾರಿ ಡಾ.ಗೌತಮ ಅರಳಿ,ಪಂಚಾಯತ್ ರಾಜ್ ಇಂಜನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರ ಶಿವಾಜಿ ಡೋಣಿ,ಸಹಾಯಕ ಕಾರ್ಯದರ್ಶಿಗಳಾದ ರಮೇಶ ನಾಥೆ,ಬೀರೇಂದ್ರಸಿಂಗ್,ಜಯಪ್ರಕಾಶ ಚಹ್ವಾಣ ಮತ್ತು ಜಿಲ್ಲಾ ಪಂಚಾಯತಿಯ ಅಧಿಕಾರಿಗಳು,ಸಿಬ್ಬಂದಿಯವರು ಸಂವಿಧಾನ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಅಭಿವೃದ್ಧಿ ವಿಭಾಗದ ಅಧೀಕ್ಷಕ ಮಹ್ಮದ್ ಬಶೀರ್ ಪ್ರಸ್ತಾವನೆ ಮಾಡಿದರೆ ಸ್ವರೂಪಾರಾಣಿಯವರು ಪ್ರಾರ್ಥನೆ ಸಲ್ಲಿಸಿದರು.ಪ್ರವೀಣಸ್ವಾಮಿ ಕಾರ್ಯಕ್ರಮ ನಿರ್ವಹಿಸಿದರು.