ಡಿ.5 ರಂದು ಸ್ವಾಭಿಮಾನ ಸಮಾವೇಶ | ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ

ಶಹಾಪುರ  : ರಾಜ್ಯದಲ್ಲಿ ಕಳೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ. ಪಟ್ಟಭದ್ರ ಶಕ್ತಿಗಳ ವಿರುದ್ಧ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೈತಿಕ ಬೆಂಬಲ ನೀಡುವಂತೆ ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಸಿದ್ದರಾಮಯ್ಯ ಸ್ವಾಭಿಮಾನಿ ಬಳಗದಿಂದ ಜನಾಂದೋಲನ ಸಮಾವೇಶ ನಡೆಯುತ್ತಿದ್ದು ಕಾರ್ಯಕ್ರಮದಲ್ಲಿ ಬೃಹತ್ ಪ್ರಮಾಣದಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಸಿದ್ದರಾಮಯ್ಯನವರ ಅಭಿಮಾನಿಗಳು ಪಾಲ್ಗೊಳ್ಳುವಂತೆ ಕಾಂಗ್ರೆಸ್ ಮುಖಂಡರಾದ ಶಾಂತಗೌಡ ನಾಗನಟಗಿ, ಶಾಂತಕುಮಾರ ಕಾಡಂಗೇರಾ ಹಾಗೂ ಮಾಳಪ್ಪ ಸುಂಕದ ಕೆಂಭಾವಿ ತಿಳಿಸಿದ್ದಾರೆ. ಉಪಚುನಾವಣೆಯ ಗೆಲುವು ಕಾಂಗ್ರೆಸ್ ಪಕ್ಷ ಮತ್ತು ಸಿದ್ದರಾಮಯ್ಯನವರ ಗೆಲುವಾಗಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ, ಯಾದಗಿರಿ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಪುರ ಸೇರಿದಂತೆ ಸಚಿವರು ಶಾಸಕರು ಅಭಿಮಾನಿಗಳು ಪಕ್ಷದ ಕಾರ್ಯಕರ್ತರು ಬೃಹತ್
ಪ್ರಮಾಣದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.