
ಶಹಾಪುರ : ಇತ್ತೀಚೆಗೆ ಶಿಗ್ಗಾವಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದೆ. ನೂತನ ಶಾಸಕರಾಗಿ ಆಯ್ಕೆಯಾದ ಯಾಸಿರ್ ಅಹಮದ್ ಖಾನ್ ಪಠಾಣ್ ಅವರಿಗೆ ಕೆಪಿಸಿಸಿ ರಾಜ್ಯ ಸಂಯೋಜಕರಾದ ರಾಜ್ ಮಹಿನೂದ್ದೀನ್ ಜಮಾದಾರ್ ದೋರನಹಳ್ಳಿ ಅವರು ಬೆಂಗಳೂರಿನ ಶಾಸಕರ ಭವನದಲ್ಲಿ ಸನ್ಮಾನಿಸಿ ಮಾತನಾಡಿದ ಅವರು, ಶಿಗ್ಗಾವಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರಾನೇರ ಹಣಾಹಣಿ ನಡೆದಿತ್ತು. ರಾಜ್ಯದಲ್ಲಿ ಸರಕಾರ ಕೈಗೊಂಡಿರುವ ಗ್ಯಾರೆಂಟಿ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳು ಈ ಉಪಚುನಾವಣೆ ಗೆಲುವಿಗೆ ಕಾರಣವಾಗಿವೆ. ಕಾಂಗ್ರೆಸ್ ಪಕ್ಷ ಬಡವರು ಶೋಷಿತರು ಅಲ್ಪಸಂಖ್ಯಾತರ ಪರವಾಗಿ ಯಾವತ್ತಿಗೂ ರಾಜ್ಯದಲ್ಲಿ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿಯೂ ಕೂಡ ಒಳ್ಳೆಯ ಆಡಳಿತ ರಾಜ್ಯಕ್ಕೆ ಕೊಡುತ್ತೇವೆ. ಶಿಗ್ಗಾವಿ ಕ್ಷೇತ್ರದ ನೂತನ ಶಾಸಕರು ಕೂಡ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುತ್ತಾರೆ ಎಂದು ಹೇಳಿದರು.
Post Views: 177