ಶಹಾಪೂರ: ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ 2ಎ ಮೀಸಲಾತಿಗಾಗಿ ಶಾಂತಿಯುತ ಪ್ರತಿಭಟನಾಕಾರರ ಮೇಲೆ ಸರಕಾರವು ಲಾಠಿಚಾರ್ಜ್ ನಡೆಸಿ ಅಮಾನವೀಯವಾಗಿ ವರ್ತಿಸಿದೆ. ಈ ಘಟನೆಯನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಬಿಜೆಪಿ ಯುವ ಮುಖಂಡ ಕರಣ ಸುಬೇದಾರ ಒತ್ತಾಯಿಸಿದ್ದಾರೆ. ಸಾಮಾಜಿಕ ನ್ಯಾಯದಡಿ ಪಂಚಮಸಾಲಿಗಳಿಗೆ ನ್ಯಾಯ ಕೊಡುವ ಕೆಲಸ ಮಾಡಿ ಎಂದು ಆಗ್ರಹಿಸಿದರು. ಪೊಲೀಸರ ಲಾಠಿ ಚಾರ್ಜ್ ನಿಂದ
ನೂರಾರು ಪಂಚಮಸಾಲಿ ರೈತರು ಗಾಯಗೊಂಡಿದ್ದಾರೆ. ಸರಕಾರದ್ದು ಸರ್ವಾಧಿಕಾರಿ ನಡೆ, ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಖಂಡಿಸಿದರು.ಬಿಜೆಪಿ ಸರಕಾರ ನೀಡಿದ ಮೀಸಲಾತಿಯನ್ನು ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಲಿಲ್ಲ. ಇದರಿಂದಾಗಿ ಹೋರಾಟ ಅನಿವಾರ್ಯವಾಗಿದೆ. ಪಂಚಮಸಾಲಿ 2ಎ ಮೀಸಲಾತಿಗಾಗಿ ಹೋರಾಟ ನಡೆಸಿದ ಕಾಂಗ್ರೆಸ್ ಪಕ್ಷದ ನಾಯಕರು ಎಲ್ಲಿ ಹೋಗಿದ್ದಾರೆ ಎಂದು ಕಿಡಿಕಾರಿದರು. ಕೂಡಲೇ ಬಿಜೆಪಿ ಸರ್ಕಾರ ಅನುಷ್ಠಾನಗೊಳಿಸಿದ ಮೀಸಲಾತಿಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು