ಯಾದಗಿರಿ ಬ್ರೇಕಿಂಗ್ NEWS
ಯಾದಗಿರಿ: ಜಿಲ್ಲೆಯ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದ್ದು,ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಯುತ್ತಿದೆ.
ಸಿಐಟಿಯು ತಾಲೂಕ ಸಂಚಾಲಕ ಮಲ್ಲಯ್ಯ ಪೊಲಂಪಲ್ಲಿ ನೇತೃತ್ವದಲ್ಲಿ ಪ್ರತಿಭಟನೆಯಲ್ಲಿ ನೂರಾರು ಬಿಸಿಯೂಟ ನೌಕರರು ಭಾಗಿಯಾಗಿದ್ದು,ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಬಿಸಿಯೂಟ ನೌಕರರನ್ನು ಡಿ ಗ್ರೂಪ್ ನೌಕರರೆಂದು ಪರಿಗಣಿಸಿ, ಕನಿಷ್ಟ ವೇತನ ಮತ್ತು ಸೇವೆಯನ್ನು ಖಾಯಂ ಮಾಡಲು ಒತ್ತಾಯಿಸಲಾಗುತ್ತಿದ್ದು,ಸುಡು ಬಿಸಿಲನ್ನು ಲೆಕ್ಕಿಸದೇ ಸರ್ಕಾರದ ವಿರುದ್ಧ ಅಸಮಧಾನ ಹೊರ ಹಾಕುತ್ತಿದ್ದಾರೆ.