ಶಹಾಪುರ:ನಗರದ ಡಿಡಿಯು.ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಂದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಜರಗಿತು.ಶಿಕ್ಷಣ ಕ್ಷೇತ್ರ ಸಂಪನ್ಮೂಲ ಅಧಿಕಾರಿ ರೇಣುಕಾ ಪಾಟೀಲ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಾ,
ಮಕ್ಕಳಜ್ಞಾನ ವೃದ್ಧಿಗೆ ವಸ್ತು ಪ್ರದರ್ಶನಗಳು ಪೂರಕವಾಗಿವೆ ಅವರಲ್ಲಿ ತಂತ್ರಜ್ಞಾನ, ಪರಿಸರ ಕಾಳಜಿ ಹಾಗೂ ಚರಿತ್ರೆಯ ಬಗ್ಗೆ ಆಸಕ್ತಿ ಬೆಳೆಯುತ್ತದೆ, ಅವರಲ್ಲಿರುವ ಸೃಜನಶೀಲತೆಗೆ ಉತ್ತೇಜನ ಸಿಗುತ್ತದೆ.ಇಂಥ ವಸ್ತು ಪ್ರದರ್ಶನ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗುತ್ತದೆ ಎಂದು ತಿಳಿಸಿದರು.

ಸಂಸ್ಥೆಯ ಮುಖ್ಯಸ್ಥ ಡಾ. ಭೀಮಣ್ಣ ಮೇಟಿ ಮಾತನಾಡಿ, ತಾಂತ್ರಿಕವಾಗಿ ಬೆಳೆಯುತ್ತಿರುವ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಕ್ಷರಾಭ್ಯಾಸ ಇದ್ದರೆ ಸಾಕಾಗುವುದಿಲ್ಲ, ಜೊತೆಗೆ ಜ್ಞಾನದ ಅವಶ್ಯಕತೆ ಇಂದಿನ ದಿನಗಳಲ್ಲಿ ಹೆಚ್ಚಾಗುತ್ತಿದೆ ಎಂದರು.
ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ವಿಜ್ಞಾನ ವಸ್ತು ಪ್ರದರ್ಶನ ವಿಷಯಗಳು ಕೆಂಪು ಕೋಟೆ ,ರಾಮ ಮಂದಿರ, ಜೋಗ ಜಲಪಾತ, ಮೈಸೂರು ಅರಮನೆ, ಹಳ್ಳಿ ಸೊಗಡು, ಜನಪದ ಕಲೆಗಳು, ತೋಟಗಾರಿಕೆ, ಮುರುಡೇಶ್ವರ, ಕೃಷಿ ವಿಜ್ಞಾನ, ಸೇರಿದಂತೆ ವಿದ್ಯಾರ್ಥಿಗಳು ಪ್ರದರ್ಶಿಸಿದ ವಿವಿಧ ಮಾದರಿಗಳು ಗಮನ ಸೆಳೆದವು.
ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ನಾರಾಯಣಾಚಾರ್ಯ ಸಗರ, ದೋರನಹಳ್ಳಿ ಸಿ.ಆರ್.ಪಿ ಜಗದೀಶ, ವಿ.ಎಮ್.ಎಮ್ ಟ್ರಸ್ಟ್ ಅಧ್ಯಕ್ಷೆ ವಿದ್ಯಾ.ಬಿ.ಮೇಟಿ, ಪ್ರಾಂಶುಪಾಲ ಮಥಾಯಿ.ಎಮ್.ವಿ ಸೇರಿದಂತೆ ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು ಇದ್ದರು. ವಸ್ತು ಪ್ರದರ್ಶನದಲ್ಲಿ ಭಾಗವಹಿಸಿದ್ದವರಿಗೆ ಮಕ್ಕಳು ತಾವು ತಯಾರಿಸಿದ ವಿಜ್ಞಾನ ಮಾದರಿಗಳನ್ನು ವಿವರಿಸಿದರು.
Post Views: 190