ಡಿಡಿಯು ಕಾನ್ವೆಂಟ್ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ

ಶಹಾಪುರ : ನಗರದ ಡಿಡಿಯು ಕಾನ್ವೆಂಟ್ ಶಾಲೆಯಲ್ಲಿ 26 ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು ವಿಎಂಎಂ ಟ್ರಸ್ಟ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಭೀಮಣ್ಣ ಮೇಟಿ  ಧ್ವಜಾರೋಹಣ ನೆರವೇರಿಸಿದರು. ಜಗತ್ತಿನಲ್ಲಿಯೇ ನಮ್ಮ ದೇಶದ ಸಂವಿಧಾನ  ಅತಿ ದೊಡ್ಡ ಲಿಖಿತ ಸಂವಿಧಾನವಾಗಿದ್ದು, ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ ಸರ್ವಧರ್ಮ ಸಮ ಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರಚಿಸಲು ಮತ್ತು ಅದರ ನಾಗರಿಕರಿಗೆ ಸಾಮಾಜಿಕ ಆರ್ಥಿಕ ಮತ್ತು ರಾಜಕೀಯ ನ್ಯಾಯ ವಿಚಾರ ಅಭಿವ್ಯಕ್ತಿ ಸ್ವಾತಂತ್ರ್ಯ ವಿಶ್ವಾಸ ಧರ್ಮ ಶ್ರದ್ಧೆ ಮತ್ತು ಉಪಾಸನ ಸ್ವತಂತ್ರ ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಿದ ಡಾ. ಬಿಆರ್ ಅಂಬೇಡ್ಕರ್ ಅವರಿಗೆ ನಾವು ಗೌರವವನ್ನು ಸಲ್ಲಿಸುವಂತಹ ದಿನವಾಗಿದೆ ಎಂದು ಮಕ್ಕಳಿಗೆ ತಿಳಿಸಿದರು.ಎಲ್ಲಾ ಭಾರತೀಯ ನಾಗರಿಕರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯೋಣ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು ಸಿಬ್ಬಂದಿ ವರ್ಗ ಶಾಲಾ ಮಕ್ಕಳು ಉಪಸ್ಥಿತರಿದ್ದರು.ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.