ದೋರನಹಳ್ಳಿ ಡಿಡಿಯು ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಸಂಭ್ರಮ

ಶಹಾಪುರ : ದೋರನಹಳ್ಳಿ ಗ್ರಾಮದ ಡಿ.ಡಿ.ಯು ಶಿಕ್ಷಣ ಸಂಸ್ಥೆಯಲ್ಲಿ 76ನೇ ಗಣರಾಜ್ಯೋತ್ಸವ ಸಂಭ್ರಮ, ಸಡಗರದಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಗಣರಾಜ್ಯೋತ್ಸವದ ಪ್ರಯುಕ್ತ ಡಿಡಿಯು ಶಾಲೆಯ ಮುಖ್ಯಗುರು ಪ್ರಕಾಶ ಬಳ್ಳಾರಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಸಂಸ್ಥೆಯ ಮೈದಾನದಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ಗ್ರಾಮದ ಸಹಾಯಕ ಅಭಿಯಂತರ ಮಾನಪ್ಪ ಮಾತನಾಡಿ ಭಾರತ ಜಾತ್ಯಾತೀತ ರಾಷ್ಟ್ರ.ಭಾರತದಲ್ಲಿ ಎಲ್ಲ ಪ್ರಜೆಗಳಿಗೂ ಸಮಾನ ಹಕ್ಕಿದೆ.ಶಿಕ್ಷಣ, ಸಮಾನತೆ, ವಾಕ್‌ ಸ್ವಾತಂತ್ರ್ಯ ಹಕ್ಕುಗಳು, ಇಚ್ಛೆಯ ಧರ್ಮವನ್ನು ಸ್ವೀಕರಿಸುವ ಹಕ್ಕುಗಳಿವೆ.1950 ರ ಜನವರಿ 26 ರಂದು ಜಾರಿಗೆ ಬಂದ ಬೃಹತ್ ಸಂವಿಧಾನದಿಂದ ಪ್ರತಿ ವರ್ಷ ಈ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸುತ್ತೇವೆ ಎಂದು ಹೇಳಿದರು. ಈ ದಿನವನ್ನು ರಾಷ್ಟ್ರದೆಲ್ಲೆಡೆ ರಕ್ಷಣಾ ಪಡೆಗಳು ಪರೇಡ್‌ ಮಾಡುವ ಮೂಲಕ, ಶಾಲೆಗಳು, ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ಮಾಡುವ ಮೂಲಕ ಸಂವಿಧಾನ ಜಾರಿಗೆ ಬಂದ ದಿನವನ್ನು ಗಣರಾಜ್ಯೋತ್ಸವ ದಿನವಾಗಿ ಆಚರಣೆ ಮಾಡಲಾಗುತ್ತದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಮಹೇಶ್ ಪತ್ತಾರ ಅವರು ಭಾರತ ಸಂವಿಧಾನದದ ಕುರಿತು ಪರಿಚಯ ಮಾಡಿದರು.ನಂತರ ವಿದ್ಯಾರ್ಥಿಗಳಿಂದ ಗಣರಾಜ್ಯೋತ್ಸವದ ಕುರಿತು ಭಾಷಣ ಮಾಡಿದರು. ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಾಲೆಯ ಶಿಕ್ಷಕರು  ಉಪನ್ಯಾಸಕರು ಸೇರಿದಂತೆ ಇತರರು ಇದ್ದರು.