
ಶಹಾಪುರ : ತಾಲ್ಲೂಕಿನ ಭೀಮರಾಯನಗುಡಿ ಕೃಷ್ಣಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ೪೦ನೇ ಶಾಲಾ ವಾರ್ಕಷಿಕೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ಕಾರ್ಯಕ್ರಮವನ್ನು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಆರ್.ಚೆನ್ನಬಸ್ಸು ವನದುರ್ಗ ಮಾತನಾಡಿ,ನಿರಂತರ ಅಧ್ಯಯನದ ಮೂಲಕ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಜವಾಬ್ದಾರಿಯನ್ನು ಶ್ರದ್ಧೆಯಿಂದ ನಿರ್ವಹಿಸಬೇಕು.ಶಿಕ್ಷಣ ಜತೆಯಲ್ಲಿ ಮಕ್ಕಳಿಗೆ ನೈತಿಕ ಮೌಲ್ಯದ ಪಾಠವನ್ನು ಕಲಿಸಬೇಕು.

ದೇಶಾಭಿಮಾನದ ಬಗ್ಗೆ ಸದಾ ಮಕ್ಕಳಲ್ಲಿ ಜಾಗೃತಿಯ ಅರಿವು ಮೂಡಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳು ಬಡ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ನೀಡುವುದರ ಜತೆಗೆ ಸೇವಾ ಮನೋಭಾವದಿಂದ ಕೆಲಸ ಮಾಡಿ ತಿಳಿಸಿದರು.

ತಾಲ್ಲೂಕಿನಲ್ಲಿ ಹೆಚ್ಚಾಗಿ ಯಾವುದೇ ಪರವಾನಿಗೆ ಪಡೆದುಕೊಳ್ಳದೆ ಕೊಚಿಂಗ್ ಕೇಂದ್ರಗಳನ್ನು ಸ್ಥಾಪಿಸಿದ್ದಾರೆ. ಇದರ ಬಗ್ಗೆ ನಾವು ಹೋರಾಟ ನಡೆಸಿದ್ದೇವೆ. ರ‍್ಕಾರಿ ಶಾಲೆಯಲ್ಲಿ ನೋಂದಣಿ ಮಾಡಿಸಿ ಅನಧಿಕೃತ ತರಬೇತಿ ಕೇಂದ್ರದಲ್ಲಿ ಅಭ್ಯಾಸ ಮಾಡಲು ಬಿಡುತ್ತಿರುವುದು ಸರಿಯಲ್ಲ. ಪಾಲಕರು ಇದರ ಬಗ್ಗೆ ಅರಿತುಕೊಳ್ಳಬೇಕು ಎಂದರು.

ಸಂಸ್ಥೆಯ ಮುಖ್ಯಸ್ಥ ಅರವಿಂದ ಮುಡಬೂಳ ಮಾತನಾಡಿ, ನಮ್ಮ ಸಂಸ್ಥೆಯು ೪೦ ವರ್ಷದಿಂದ ಸಾಕಷ್ಟು ತೊಂದರೆಯ ನಡುವೆ ಮುನ್ನಡಸಿಕೊಂಡು ಬಂದಿದ್ದೇವೆ. ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಗ್ರಾಮೀಣ ಪ್ರದೇಶದ ಮಕ್ಕಳ ಕಲಿಕೆಗೆ ನಾವು ಹೆಚ್ಚು ಒತ್ತು ನೀಡಿದ್ದೇವೆ ಎಂದರು.

ಮುಡಬೂಳ ಸದ್ಗುರು ರಂಗಲಿಂಗೇಶ್ವರ ಮಠದ ಪೀಠಾಧಿಪತಿ ತ್ರಿಶೂಲ ಹವಾಲ್ದಾರ, ಸಂಸ್ಥೆಯ ಆಡಳಿತಾಧಿಕಾರಿ ಗುರುಲಿಂಗಯ್ಯ ಹಿರೇಮಠ, ವಕೀಲರಾದ ಉಮೇಶ ಮುಡಬೂಳ, ಎಎಸ್ ಐ ಈಶ್ವರಪ್ಪ ಭಾಗವಹಿಸಿದ್ದರು.
ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.
Post Views: 74