
ಶಹಪುರ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಎರಡು ವರ್ಷ ಸಮೀಪಿಸುತ್ತಿದೆ. ಪಕ್ಷ ಅಧಿಕಾರಕ್ಕೆ ಬರಲು ಕೆಪಿಸಿಸಿ ರಾಜ್ಯ ಸಂಯೋಜಕರ ಪಾತ್ರ ಹೆಚ್ಚಿನದು ಎಂದು ರಾಜ್ಯ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ತಿಳಿಸಿದರು ಎಂದು ಯಾದಗಿರಿ ಜಿಲ್ಲಾ ಕೆಪಿಸಿಸಿ ರಾಜ್ಯಸಂಯೋಜಕರಾದ ರಾಜ್ ಮೋಹಿನುದ್ದೀನ್ ಜಮಾದಾರ್ ದೋರನಹಳ್ಳಿ ತಿಳಿಸಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿ ಇಂದಿರಾಗಾಂಧಿ ಭವನದಲ್ಲಿ ನಡೆದ ರಾಜ್ಯ ಸಂಯೋಜಕರ ಸಭೆಯಲ್ಲಿ ಪಾಲ್ಗೊಂಡ ಅವರು ರಾಜ್ಯದಲ್ಲಿ ಸ್ಥಳೀಯ ತಾಲೂಕು ಪಂಚಾಯಿತಿ ಜಿಲ್ಲಾ ಪಂಚಾಯಿತಿ ಚುನಾವಣೆಗಳು ಸಮೀಪಿಸುತ್ತಿದ್ದು, ಸ್ಥಳೀಯವಾಗಿ ಕಾಂಗ್ರೆಸ್ ಪ್ರಭಲವಾಗಬೇಕಿದೆ. ಅದಕ್ಕಾಗಿ ನಿಮ್ಮ ಸಹಕಾರ ಅಗತ್ಯವಿದೆ. ಸ್ಥಳೀಯ ಮಟ್ಟದಲ್ಲಿ ಪಕ್ಷ ಸಂಘಟನೆಗೆ ತೊಡಗಿಸಿಕೊಳ್ಳಿ. ಸ್ಥಳೀಯ ಚುನಾವಣೆ ಎದುರಿಸಲು ಸಿದ್ದರಾಗಿ ಎಂದು ಅಧ್ಯಕ್ಷರು ಕರೆಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ಸಂಯೋಜಕರಿಗೆ ಸರಕಾರ ಮತ್ತು ಪಕ್ಷದ ಮಟ್ಟದಲ್ಲಿ ಉನ್ನತ ಸ್ಥಾನಮಾನ ನೀಡಲಾಗುವುದು ಎಂದು ತಿಳಿಸಿದ್ದಾರೆ ಎಂದು ಹೇಳಿದರು.