ಶಹಪುರ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಾಖಲೆಯ 16ನೇ ಬಜೆಟ್ ಮಂಡಿಸಿದ್ದಾರೆ ಕೆಪಿಸಿಸಿ ರಾಜ್ಯ ಸಂಯೋಜಕರಾದ ರಾಜ್ ಮೊಹಿನುದ್ದೀನ್ ಜಮಾದಾರ್ ದೋರನಹಳ್ಳಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಎಲ್ಲಾ ಸಮುದಾಯಗಳಿಗೆ ಒತ್ತುಕೊಟ್ಟ ಬಜೆಟ್ ಇದಾಗಿದೆ. ಎಲ್ಲರಿಗೂ ಸಮತೂಕವಾದ ಬಜೆಟ್ ಮಂಡಿಸಿದ್ದಾರೆ. ಅಲ್ಪಸಂಖ್ಯಾತರಿಗೆ ಒತ್ತುಕೊಟ್ಟು ವಿದ್ಯಾರ್ಥಿಗಳಿಗೆ, ವಸತಿ ಶಾಲೆಗಳಿಗೆ ಹೆಚ್ಚಿನ ಆಸಕ್ತಿ ವಹಿಸಿ ಅನುದಾನ ನೀಡಲಾಗಿದೆ. ಅಲ್ಪಸಂಖ್ಯಾತರ ಧ್ವನಿ ಸಿದ್ದರಾಮಯ್ಯನವರು ಸಾಮಾಜಿಕ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚು ಹೊತ್ತು ಈ ಬಜೆಟ್ ನಲ್ಲಿ ನೀಡಲಾಗಿದೆ. ಸರಕಾರಿ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತರಿಗೆ ಎರಡು ಕೋಟಿ ಮೀಸಲು ಇಡಲಾಗಿದೆ. ಸಚಿವರಾದ ಪ್ರಿಯಾಂಕ್ ಖರ್ಗೆ, ಶರಣಬಸಪ್ಪಗೌಡ ದರ್ಶನಪುರ, ಜಹೀರ್ ಅಹ್ಮದ್ ಖಾನ್, ರಹೀಮ್ ಖಾನ್ ಹಾಗೂ ಶಾಸಕರಾದ ನಾಸಿರ ಅಹಮದ್, ರಿಜ್ವಾನ್ ಹರ್ಷದ್, ಸಲೀಂ ಅಹಮದ್, ಚನ್ನಾರಡ್ಡಿ ಪಾಟೀಲ್ ತುನ್ನೂರು, ರಾಜಾ ವೆಂಕಟಪ್ಪ ನಾಯಕ್, ಸಂಸದರಾದ ರಾಧಾಕೃಷ್ಣ, ಜಿ ಕುಮಾರ ನಾಯಕ್ ಎಲ್ಲರಿಗೂ ಅಭಿನಂದನೆಗಳು ಎಂದು ತಿಳಿಸಿದರು.
Post Views: 92