ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ನಿಖಿಲ್ ವಿ ಶಂಕರ್ ಯಾದಗಿರಿ ಜಿಲ್ಲಾ ಪ್ರವಾಸ ಇಂದು 

ಶಹಾಪುರ,,

ರಾಜ್ಯ ಕಾಂಗ್ರೆಸ್ ಪಕ್ಷದ ಯುವ ಘಟಕದ ರಾಜ್ಯ ಉಪಾಧ್ಯಕ್ಷರಾದ ನಿಖಿಲ್ ವಿ ಶಂಕರ್ ಯಾದಗಿರಿ ಜಿಲ್ಲೆಯಲ್ಲಿಂದು ಪ್ರವಾಸ ಕೈಗೊಳ್ಳಲಿದ್ದು ಹಲವು ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಸುರಪುರ ತಾಲೂಕಿನ ಜಾಲಿಬೆಂಚಿ ಗ್ರಾಮದ ಬೀರಲಿಂಗೇಶ್ವರ ನೂತನ ದೇವಸ್ಥಾನ ಮತ್ತು ಮೂರ್ತಿ ಪ್ರತಿಷ್ಠಾಪನಾ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನಿಖಿಲ್ ವಿ ಶಂಕರ್ ಪಾಲ್ಗೊಳ್ಳಲಿದ್ದು, ದೇವಸ್ಥಾನದ ಉದ್ಘಾಟಕರಾಗಿ ಆಗಮಿಸದ್ದಾರೆ. ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು 12:30ಕ್ಕೆ ಎಲ್ಲಾ ಸ್ವಾಮೀಜಿಯವರ ಸಾನಿಧ್ಯ ಹಾಗೂ ಗಣ್ಯ ವ್ಯಕ್ತಿಗಳ ಸಮ್ಮುಖದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಜರುಗಲಿದೆ. ಸ್ಥಳೀಯ ಸಚಿವರು ಶಾಸಕರು ಹಾಲುಮತ ಸಮಾಜದ ಗಣ್ಯ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ತಿಳಿಸಿದರು. ನಂತರ ವಡಗೇರಾ ತಾಲೂಕಿನ ಬಸಂತಪುರ ಗ್ರಾಮದಲ್ಲಿ ನಡೆಯುವ ಬೀರಲಿಂಗೇಶ್ವರ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.