ದಾನಗಳಲ್ಲಿ ರಕ್ತದಾನ ಮಹಾದಾನ : ಸುಬೇದಾರ

ಶಹಾಪೂರ: ದಾನಗಳಲ್ಲಿ ರಕ್ತದಾನ ಮಹಾದಾನ ಜನರ ಜೀವ ರಕ್ಷಣೆಗೆ ರಕ್ತ ಅತ್ಯಾವಶ್ಯಕವಾಗಿದ್ದು, ರಕ್ತದ ಅವಶ್ಯಕತೆ ಇರುವ ವ್ಯಕ್ತಿಗಳಿಗೆ ರಕ್ತದಾನ ಮಾಡುವುದರ ಮೂಲಕ ಎಲ್ಲರೂ ಜನರ ಅಮೂಲ್ಯವಾದ ಜೀವ ರಕ್ಷಣೆಗೆ ಮುಂದಾಗಬೇಕು ಎಂದು ಬಿಜೆಪಿ ಯುವ ಮುಖಂಡ ಕರಣ ಸುಬೇದಾರ ಹೇಳಿದರು.
ನಗರದ ಹಿಂದೂ ಮಹಾ ಗಣಪತಿ ವತಿಯಿಂದ ನವಜೀವನ ಬ್ಲಡ್ ಬ್ಯಾಂಕ್ ಇವರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರದಲ್ಲಿ ಮಾತನಾಡಿ
ಒಂದು ಪ್ರದೇಶದ ಜನರ ಸರ್ವಾಂಗೀಣ ಅಭಿವದ್ಧಿಗೆ ಆರೋಗ್ಯ ಅತ್ಯಂತ ಅವಶ್ಯಕವಾಗಿದೆ. ಪ್ರತಿಯೊಬ್ಬರು ಆರೋಗ್ಯ ಬಗ್ಗೆ ಸೂಕ್ತ ಕಾಳಜಿ ವಹಿಸಬೇಕು. ಹಲವು ರೋಗಗಳನ್ನು ಪ್ರಾರಂಭದಲ್ಲಿಯೇ ಗುರುತಿಸಿದರೆ ಅವುಗಳನ್ನು ಗುಣಪಡಿಸಬಹುದು. ಜನರು ಮತ್ತು ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆ ಸದಾ ಜಾಗೃತರಾಗಿರಬೇಕು ಎಂದು ತಿಳಿಸಿದರು.
ಮಾನವನಿಗೆ ಆಕಸ್ಮಿಕ ಸಂದರ್ಭಗಳಲ್ಲಿ ತುರ್ತಾಗಿ ಅಗತ್ಯವಾಗಿ ಬೇಕಾಗುವ ರಕ್ತವು ಅಮೂಲ್ಯ ಜೀವ ಉಳಿಸುವ ವಸ್ತುವಾಗಿದೆ. ಇದನ್ನರಿತು ಸಮಾಜದ ಪ್ರತಿಯೊಬ್ಬ ಆರೋಗ್ಯವಂತರು ರಕ್ತದಾನ ಮಾಡುವ ಮೂಲಕ ಮಾದರಿಯಾಗಬೇಕು. ರಕ್ತದಾನ ಮಾಡಿದರೆ ತಮ್ಮ ದೇಹದ ಕೊಬ್ಬಿನಾಂಶ ಕಡಿಮೆಯಾಗಿ ಹೊಸ ರಕ್ತ ಉತ್ಪತ್ತಿಯಾಗಲಿದೆ.
ಪ್ರತಿಯೊಬ್ಬರೂ ಪ್ರಮುಖವಾಗಿ ಯುವ ಜನಾಂಗ ವರ್ಷಕ್ಕೆ 3-4ಬಾರಿ ರಕ್ತದಾನ ಮಾಡುವ ಮೂಲಕ ಅಮೂಲ್ಯ ಜೀವಗಳನ್ನು ಉಳಿಸಬಹುದು. ಸ್ವಯಂ ಪ್ರೇರಿತ ರಕ್ತದಾನ ಶಿಬಿರಗಳು ಹೆಚ್ಚಾಗಿ ನಡೆಯಬೇಕು ಎಂದರು.
ಈ ಸಂದರ್ಭದಲ್ಲಿ ಪತ್ರಕರ್ತರಾದ ಮಲ್ಲಿಕಾರ್ಜುನ ಮುದನೂರು ಸಂಗಮೇಶ ಕುಂಬಾರ ನಾಗಭೂಷಣ ಕುಂಬಾರ ಶಿವಕುಮಾರ ಶಿರ್ವಾಳ ಸೇರಿದಂತೆ ಅನೇಕ ಯುವಕರು ಉಪಸ್ಥಿತರಿದ್ದರು.