ವಡಗೇರಾ:ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಕೆಲವು ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯತಿಯನ್ನಾಗಿ ಮೇಲ್ದರ್ಜೆಗೇರಿಸಿ ವಡಗೇರಾ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮಾಡದೆ ಕೈ ಬಿಟ್ಟಿರುವುದನ್ನು ಖಂಡಿಸಿ ಇದೆ ನವೆಂಬರ 10 ಸೋಮವಾರ ದಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ವತಿಯಿಂದ ವಡಗೇರಾ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ಅಬ್ದುಲ್ ಚಿಗಾನೂರ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ವಡಗೇರಾ ತಾಲೂಕು ಕೇಂದ್ರವಾಗಿ ಸುಮಾರು10 ವರ್ಷಗಳು ಕಳೆದರೂ ಕೂಡಾ ಪಟ್ಟಣ ಪಂಚಾಯಿತಿನ್ನಾಗಿ ಮೇಲ್ದರ್ಜೆಗೇರಿಸುವಲ್ಲಿ ನಿರ್ಲಕ್ಷ ವಹಿಸುತ್ತಿರುವ ಅಧಿಕಾರಿಗಳು ಮತ್ತು ಸರ್ಕಾರದ ಕ್ರಮ ಸರಿಯಲ್ಲ ಹೆಸರಿಗೆ ಮಾತ್ರ ತಾಲೂಕು ಕೇಂದ್ರ ಎಂದು ಘೋಷಣೆಯಾಗಿದೆ ಅಷ್ಟೇ ಇಲ್ಲಿ ಸರ್ಕಾರಿ ಕಚೇರಿಗಳಲ್ಲಿ ಪಟ್ಟಣದ ಅಭಿವೃದ್ಧಿಯಂತೂ ಶೂನ್ಯ ಎಂದು ಆರೋಪಿಸಿದ್ದಾರೆ.ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ ದರ್ಜೆಗೇರಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮನವಿ ಹಾಗೂ ಹಲವು ಬಾರಿ ಹೋರಾಟ ಮಾಡಿದರು ಕೂಡಾ ನಮ್ಮ ಬೇಡಿಕೆಗೆ ಸ್ಪಂದಿಸದೆ ಇರುವುದು ಅತ್ಯಂತ ನೋವಿನ ಸಂಗತಿಯಾಗಿದೆ ಯಾವ ಪುರುಷಾರ್ಥಕ್ಕಾಗಿ ತಾಲೂಕು ಕೇಂದ್ರ ಘೋಷಣೆ ಮಾಡಿದ್ದಾರೆ ಎಂಬುದು ತಿಳಿಯುತ್ತಿಲ್ಲ ಸರ್ಕಾರ ಪಟ್ಟಣಕ್ಕೆ ಮಾಡಿರುವ ಅನ್ಯಾಯವನ್ನು ಖಂಡಿಸಿ ಸೋಮವಾರದಂದು ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಕರವೇ ತಾಲೂಕು ಹಾಗೂ ಗ್ರಾಮ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಪಟ್ಟಣದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಾಲೂಕು ಅಧ್ಯಕ್ಷ ಅಬ್ದುಲ್ ಚಿಗಾನೂರ ಪತ್ರಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.