ನಾಳೆ ಕನಕ ಜಯಂತಿ ಯಶಸ್ವಿಗೊಳಿಸಲು ರಾಯಪ್ಪ ಛಲುವಾದಿ ಕರೆ

ಶಹಾಪುರ : ನಾಳೆ ಭಕ್ತ ಶ್ರೇಷ್ಠ ಕನಕದಾಸರ ಜಯಂತಿಯನ್ನು ಸರಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ಸ್ಥಳೀಯ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹಾಗೂ ಶಾಸಕರು, ಕರ್ನಾಟಕ ಪ್ರದೇಶ ಕುರುಬರ ಸಂಘ,ಕನಕ ನೌಕರರ ಸಂಘ, ಸಂಗೊಳ್ಳಿ ರಾಯಣ್ಣ ಯುವಕ ಸಂಘ, ಕನಕ ಗುತ್ತಿಗೆದಾರರ ಸಂಘಗಳ ನಾಯಕರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಸಂಗೊಳ್ಳಿ ರಾಯಣ್ಣ ಯುವಕ ಸಂಘದ ಅಧ್ಯಕ್ಷ ರಾಯಪ್ಪ ಛಲುವಾದಿ ತಿಳಿಸಿದರು.

ತಾಲೂಕು ಆಡಳಿತದ ವತಿಯಿಂದ ನಡೆಯುವ ಕಾರ್ಯಕ್ರಮದಲ್ಲಿ ಬೆಳಿಗ್ಗೆ 10:00 ಗಂಟೆಗೆ ಸಿಬಿ ಕಮಾನಿನಿಂದ ಕನಕದಾಸರ ಭಾವಚಿತ್ರದ ಮೆರವಣಿಗೆಯ ಮೂಲಕ ಬಸವೇಶ್ವರ ವೃತ್ತದ ಮುಖಾಂತರ ನಗರಸಭಾ ಕಾರ್ಯಾಲಯಕ್ಕೆ ಆಗಮಿಸಿದರು. 12:30 ಕ್ಕೆ ನಗರಸಭೆ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮ ಯಶಸ್ವಿಗೊಳಿಸಲು ಹಾಲುಮತ ಸಮಾಜದ ಮುಖಂಡರು ಸೇರಿದಂತೆ ಗುರುಹಿರಿಯರು ಸುತ್ತಲಿನ ಗ್ರಾಮದ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದರು.