ವಡಗೇರಾ:ತಾಲೂಕಿನ ತಡಿಬಿಡಿ ಗ್ರಾಮದ ವಾರ್ಡ್ ನಂಬರ್ 3 ರಲ್ಲಿ ಕೆಟ್ಟು ನಿಂತಿರುವ ಕುಡಿಯುವ ನೀರಿನ ಮೋಟಾರ್ ದುರಸ್ತಿಗೊಳಿಸುವಂತೆ ರಾಜ್ಯ ರೈತ ಸಂಘ ಹಸಿರು ಸೇನೆ ತಾಲೂಕು ಉಪಾಧ್ಯಕ್ಷ ಸಂಗಮೇಶ್.ಬಿ.ಸುರಪುರ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸುಮಾರು ದಿನಗಳಿಂದ ಗ್ರಾಮದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಸಿಸಿ ರಸ್ತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಇನ್ನಿತರ ಮೂಲಭೂತ ಸೌಕರ್ಯಗಳಿಲ್ಲ. ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆ ಆಗುತ್ತಿದೆ.ವಾರ್ಡ್ ನಂಬರ್ 3 ರಲ್ಲಿ ಸುಮಾರು 20 ದಿನಗಳಿಂದ ಕುಡಿಯುವ ನೀರು ಎತ್ತುವ ಮೋಟರ್ ಕೆಟ್ಟಿದ್ದು ದುರಸ್ತಿಗೊಳಿಸುವಂತೆ ಪಿಡಿಓ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಕೂಡಾ ಯಾವುದೇ ಪ್ರಯೋಜನವಾಗಿಲ್ಲ ಈಗಲಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಗ್ರಾಮದಲ್ಲಿ ಸಂಪೂರ್ಣ ಕುಡಿಯುವ ನೀರಿನ ವ್ಯವಸ್ಥೆ ಸಿ ಸಿ ರಸ್ತೆ ಚರಂಡಿ ನಿರ್ಮಾಣಕ್ಕೆ ಮುಂದಾಗಬೇಕು.ಒಂದು ವೇಳೆ ನಿರ್ಲಕ್ಷ ವಹಿಸಿದ್ದಲ್ಲಿ ರಾಜ್ಯ ರೈತ ಸಂಘದ ತಾಲೂಕು ಘಟಕದ ವತಿಯಿಂದ ಉಗ್ರ ಹೊರಾಟ ಮಾಡುವುದಾಗಿ ಎಚ್ಚರಿಸಿದರು.