Blog

ಶರಣಬಸಪ್ಪಗೌಡ ದರ್ಶನಾಪುರಗೆ ಸಚಿವ ಸ್ಥಾನ ನೀಡಲು ಅಭಿಮಾನಿಗಳ ಒತ್ತಾಯ ಕಲ್ಯಾಣ ಕರ್ನಾಟಕದ ಹಿರಿಯ ನಾಯಕನಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ

ಕಲ್ಯಾಣ ಕರ್ನಾಟಕದ ಹಿರಿಯ ನಾಯಕನಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ

ಬಸವರಾಜ ಕರೇಗಾರ 

ಮುಖ್ಯಾಂಶಗಳು.

► ಕಲ್ಯಾಣ ಕರ್ನಾಟಕ ಭಾಗಕ್ಕೆ ಆಧ್ಯತೆ.
► ಸಾರ್ವಜನಿಕರ ಮಧ್ಯೆ ಇರುವ ಜನನಾಯಕನಿಗೆ ಅವಕಾಶ 
► ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಆರೋಗ್ಯ ಮತ್ತು ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡುವ ಸಾಮರ್ಥ್ಯ
► ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ನೀಡುವಂತೆ ಅಭಿಮಾನಿಗಳ ಮನವಿ. 
—————————————————————

ಶಹಾಪುರ: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಕಲ್ಯಾಣ ಕರ್ನಾಟಕ ಭಾಗದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಅಭಿಮಾನಿಗಳು ಮತ್ತು ಬೆಂಬಲಿಗರು ಒತ್ತಾಯಿಸಿದ್ದಾರೆ.

ಸುದೀರ್ಘ ರಾಜಕೀಯ ಅನುಭವ ಹೊಂದಿರುವ ದರ್ಶನಾಪುರ ಅವರು ಈಗಾಗಲೇ ಮೂರು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದು, ಆಡಳಿತಾತ್ಮಕ ಅನುಭವ ಹಾಗೂ ಜನಪರ ಕಾಳಜಿಯಿಂದ ಜನರ ವಿಶ್ವಾಸ ಗಳಿಸಿದ್ದಾರೆ.

ಸಾರ್ವಜನಿಕರ ಅಹವಾಲುಗಳನ್ನು ಆಲಿಸುತ್ತಾ ಸದಾ ಜನರ ಮಧ್ಯೆ ಇರುವ ನಾಯಕನಾಗಿರುವ ಕಾರಣ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ನೀಡಬೇಕು ಎಂಬುದು ಬೆಂಬಲಿಗರ ಅಭಿಪ್ರಾಯವಾಗಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರುವ ಸಾಮರ್ಥ್ಯ ಹೊಂದಿರುವ ದರ್ಶನಾಪುರ ಅವರು ಸಚಿವರಾದರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವೇಗ ಸಿಗಲಿದೆ ಎಂದು ಅಭಿಮಾನಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಜಿಲ್ಲೆಯಲ್ಲಿ ಮತ್ತಷ್ಟು ಬಲವರ್ಧನೆಯಾಗಲಿದ್ದು, ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ಸಿಗಲಿದೆ ಎಂದು ತಿಳಿಸಿದ್ದಾರೆ.

************************************

ಸಚಿವ ಸ್ಥಾನ ನೀಡಲು ಪ್ರಮುಖ ಕಾರಣಗಳು

*ಮೂರು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ
*ಜನಪರ ಮತ್ತು ಸರಳ ವ್ಯಕ್ತಿತ್ವ
*ಸಾರ್ವಜನಿಕರ ಮಧ್ಯೆ ನಿರಂತರ ಸಂಪರ್ಕ
*ಅಭಿವೃದ್ಧಿ ಪರ ಚಿಂತನೆ
*ಕಲ್ಯಾಣ ಕರ್ನಾಟಕ ಭಾಗದ ಪ್ರಬಲ ಧ್ವನಿ

 ಅಭಿವೃದ್ಧಿಗೆ ಸಿಗುವ ಲಾಭಗಳು ಕ್ಷೇತ್ರಕ್ಕೆ ಹೆಚ್ಚಿನ ಅನುದಾನ

*ಗ್ರಾಮೀಣಾಭಿವೃದ್ಧಿ ಯೋಜನೆಗಳಿಗೆ ವೇಗ
*ಕುಡಿಯುವ ನೀರಿನ ವ್ಯವಸ್ಥೆ ಸುಧಾರಣೆ
*ರಸ್ತೆ ಹಾಗೂ ಚರಂಡಿ ನಿರ್ಮಾಣ
*ನಗರ ಮೂಲಸೌಕರ್ಯ ಅಭಿವೃದ್ಧಿ
*ಕೆರೆಗಳ ಪುನಶ್ಚೇತನ ಮತ್ತು ಅಭಿವೃದ್ಧಿ

ಸಾಮಾಜಿಕ ಕ್ಷೇತ್ರಕ್ಕೆ ಒತ್ತು

*ವಿವಿಧ ಸಮುದಾಯಗಳ ಕಲ್ಯಾಣ ಮಂಟಪಗಳಿಗೆ ಅನುದಾನ
*ಮಠ ಹಾಗೂ ಧಾರ್ಮಿಕ ಸಂಸ್ಥೆಗಳ ಅಭಿವೃದ್ಧಿಗೆ ನೆರವು
*ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ.
*ಆಸ್ಪತ್ರೆಗಳ ಉನ್ನತೀಕರಣ.
*ನಿರಾಶ್ರಿತರಿಗೆ ವಸತಿ ಸೌಲಭ್ಯ.
***********************
ಶರಣಬಸಪ್ಪಗೌಡ ದರ್ಶನಾಪುರ ಅವರು ಅನುಭವ, ಜನಪರತೆ ಹಾಗೂ ಅಭಿವೃದ್ಧಿ ದೃಷ್ಟಿಕೋನ ಹೊಂದಿರುವ ಹಿರಿಯ ನಾಯಕರು. ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಅವಕಾಶ ನೀಡಿದರೆ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹೊಸ ಚೈತನ್ಯ ಸಿಗಲಿದೆ. ಜಿಲ್ಲೆಯ ಕಾಂಗ್ರೆಸ್ ಸಂಘಟನೆಗೂ ಮತ್ತಷ್ಟು ಬಲ ಬರಲಿದೆ  ಎಂದು ಅವರು ಅಭಿಮಾನಿಗಳಾದ ಶಾಂತು ಪಾಟೀಲ್ ಮತ್ತು ಶಾಂತಗೌಡ ನಾಗನಟಗಿ ಆಗ್ರಹಿಸಿದ್ದಾರೆ.