Blog

ಮುಟ್ಟಿನ ಕಪ್ ವಿತರಣೆ ಹಾಗೂ ಸ್ಯಾನಿಟರಿ ತ್ಯಾಜ್ಯ ನಿರ್ವಹಣೆ ಕುರಿತು ಕಾರ್ಯಗಾರ

ಶಹಾಪುರ: 
ಜಿಲ್ಲಾ ಪಂಚಾಯತ್ ಯಾದಗಿರಿ, ಸ್ವಚ್ಛ ಭಾರತ ಮಿಷನ್ (ಗ್ರಾ) ಯೋಜನೆ ಹಾಗೂ ಆರೋಗ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಯಿಮ್ಸ್ ಸಭಾಂಗಣದಲ್ಲಿ “ಘನತ್ಯಾಜ್ಯ ನಿರ್ವಹಣೆಯ ನಿಯಮ–2026ರ ಅನ್ವಯ ಸ್ಯಾನಿಟರಿ ತ್ಯಾಜ್ಯ ನಿರ್ವಹಣೆ ಹಾಗೂ ಮುಟ್ಟಿನ ಕಪ್ ವಿತರಣೆ” ಕುರಿತ ಕಾರ್ಯಗಾರವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸೆ ತಜ್ಞರಾದ ಡಾ. ರಿಜ್ವಾನ್ ಅಪ್ರೀನಾ ಅವರು ಮುಟ್ಟಿನ ಕಪ್ ಬಳಕೆಯ ವಿಧಾನ, ಸುರಕ್ಷತೆ, ಆರೋಗ್ಯದ ಪ್ರಯೋಜನಗಳು ಹಾಗೂ ಸ್ವಚ್ಛತೆಯ ಮಹತ್ವದ ಕುರಿತು ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿ ತರಬೇತಿ ನೀಡಿದರು.
ಸ್ವಚ್ಛ ಭಾರತ ಮಿಷನ್ (ಗ್ರಾ) ಯೋಜನೆಯ ಸಿಬ್ಬಂದಿ ಕಾರ್ಯಗಾರದ ಉದ್ದೇಶ ಹಾಗೂ ಘನತ್ಯಾಜ್ಯ ಮತ್ತು ಸ್ಯಾನಿಟರಿ ತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಿಸುವ ಕುರಿತು ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ಸಹಾಯಕ ಯೋಜನಾಧಿಕಾರಿ ಸಂತೋಷ, ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸೆ ತಜ್ಞೆ ಡಾ. ರಿಜ್ವಾನ್ ಅಪ್ರೀನಾ, ತಾಲೂಕು ಆರೋಗ್ಯಾಧಿಕಾರಿ ಡಾ. ಹಣಮಂತರೆಡ್ಡಿ ಪಾಟೀಲ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ವೈದ್ಯರು, ಮಹಿಳಾ ಸಿಬ್ಬಂದಿ, ವಿದ್ಯಾರ್ಥಿನಿಯರು, ಸ್ವಚ್ಛ ಭಾರತ ಮಿಷನ್ (ಗ್ರಾ) ಸಿಬ್ಬಂದಿ ಹಾಗೂ ಸಹಾಸ್ ಸಂಸ್ಥೆಯ ಪ್ರತಿನಿಧಿಗಳು ಭಾಗವಹಿಸಿದ್ದರು.