Blog
ಕೆಪಿಸಿಸಿ ಪದವೀಧರ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಡಾ. ಕೃಷ್ಣಮೂರ್ತಿ ಆಯ್ಕೆ
ಡಾ.ಕೃಷ್ಣಮೂರ್ತಿ.
ಶಹಾಪುರ,,
ಸತತ ಏಳು ವರ್ಷಗಳಲ್ಲಿ ಯಾದಗಿರಿ ಜಿಲ್ಲೆಯ ಕೆಪಿಸಿಸಿ ವೈದ್ಯಕೀಯ ಘಟಕ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಪ್ರಸ್ತುತ ಪದವೀಧರ ವಿಭಾಗದ ಕೆಪಿಸಿಸಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಖ್ಯಾತ ವೈದ್ಯ ಡಾ. ಕೃಷ್ಣಮೂರ್ತಿ ಅವರನ್ನು ರಾಜ್ಯ ಪದವೀಧರ ಘಟಕದ ಅಧ್ಯಕ್ಷರಾದ ಎ ಎನ್ ನಟರಾಜ ಗೌಡ ಅವರು ನೇಮಕ ಮಾಡಿ ಆದೇಶಿಸಿದ್ದಾರೆ. ಬರುವ ದಿನಗಳಲ್ಲಿ ರಾಜ್ಯಾದ್ಯಂತ ಸಂಚರಿಸಿ ಪಕ್ಷದ ಸಂಘಟನೆಗಾಗಿ ಶ್ರಮಿಸಿ ಎಂದು ಕರೆ ನೀಡಿದ್ದಾರೆ.
ವೈದ್ಯಕೀಯ ಘಟಕದಲ್ಲಿ ಕರ್ತವ್ಯ ನಿರ್ವಹಿಸಿದ ಡಾ. ಕೃಷ್ಣಮೂರ್ತಿಯವರು ಪಕ್ಷ ಸಂಘಟನೆಗಾಗಿ ದುಡಿದಿದ್ದು ರಾಜ್ಯ ವಿಧಾನಸಭೆ ಮತ್ತು ಲೋಕಸಭೆ ಹಾಗೂ ಕೇಂದ್ರ ವಿರೋಧ ಪಕ್ಷದ ನಾಯಕರದ ರಾಹುಲ್ ಗಾಂಧಿಯವರ ಪಾದಯಾತ್ರೆಯ ಸಂದರ್ಭದಲ್ಲಿಯೂ ಶ್ರಮಿಸಿದ್ದಾರೆ.ಯಾದಗಿರಿ ರಾಯಚೂರು ಕಲಬುರ್ಗಿ ಬೀದರ ಜಿಲ್ಲೆಯಾದ್ಯಂತ ಸಂಚರಿಸಿ ಪಕ್ಷ ಸಂಘಟನೆಗೆ ಶ್ರಮಿಸಿದ್ದು ಅವರಿಗೆ ಪ್ರಸ್ತುತದಲ್ಲಿ ರಾಜ್ಯ ಕೆಪಿಸಿಸಿ ರಾಜ್ಯ ಪದವೀಧರ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್ಚಿನ ಜವಾಬ್ದಾರಿ ನೀಡಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಕೃಷ್ಣಮೂರ್ತಿಯವರು ನನ್ನನ್ನು ಪಕ್ಷ ಗುರುತಿಸಿ ನನಗೆ ಹೆಚ್ಚಿನ ಜವಾಬ್ದಾರಿ ನೀಡಿದೆ. ಈ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಂಸದ ರಾಧಾಕೃಷ್ಣ ದೊಡ್ಡಮನಿ, ಸಚಿವರಾದ ಪ್ರಿಯಾಂಕ್ ಖರ್ಗೆ,ಡಾ. ಶರಣಪ್ರಕಾಶ್ ಪಾಟೀಲ್, ಶರಣಬಸಪ್ಪಗೌಡ ದರ್ಶನಾಪುರ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ ಪಾಟೀಲ್, ರಾಜ್ಯ ಕೆಪಿಸಿಸಿ ಪದವಿ ಘಟಕದ ರಾಜ್ಯಾಧ್ಯಕ್ಷ ಎ ಎನ್ ನಟರಾಜಗೌಡ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ರಾಘವೇಂದ್ರ ಖದ್ರಿ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಕಾಂಗ್ರೆಸ್ ಮುಖಂಡರಿಗೂ, ಕಾರ್ಯಕರ್ತರಿಗೂ ನಾನು ಆಭಾರಿಯಾಗಿದ್ದೇನೆ.ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಗಾಗಿ ಶ್ರಮಿಸುವುದಾಗಿ ಪತ್ರಿಕಾ ಹೇಳಿಕೆಯಲ್ಲಿ ಡಾ. ಕೃಷ್ಣಮೂರ್ತಿಯವರು ತಿಳಿಸಿದ್ದಾರೆ.